AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ತಂದೆ
ಸಾವನ್ನಪ್ಪಿದ್ದ ಮಗ ಶಿವಕುಮಾರ ಬಿರಾದರ ( 34), ತಂದೆ ಬಸವರಾಜ ಬಿರಾದಾರ (55)
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 04, 2023 | 12:48 PM

Share

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ. ನಿನ್ನೆ(ಮಾ.3) ರಾತ್ರಿ ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು.

ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು ನೋವು ತೊಡಿಕೊಂಡಿದ್ದನಂತೆ. ಇಂದು(ಮಾ.4) ಬೆಳಿಗ್ಗಿನ ಜಾವ ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:‘ಬೆಂಗಳೂರು: ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಸಾವಿನಲ್ಲೂ ಒಂದಾದ ತಾಯಿ ಮಗ

ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಿನ್ನೆ(ಮಾ.3) ಮನಕಲುಕುವ ಘಟನೆಯೊಂದು ನಡೆದಿದೆ. ಮಗ ದಶರಥ ದುರ್ವೆ (60) ಎಂಬಾತ ಕಳೆದ ಒಂದು ವಾರದಿಂದ ಅನಾರೋಗ್ಯಕ್ಕೀಡಾಗಿದ್ದು, ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಮಗನ ಅಗಲಿಕೆ ನೋವು ಸಹಿಸದೇ ತಾಯಿ ಶಾವಕ್ಕ ದುರ್ವೆ (90) ಸಂಜೆ ಹೃದಯಾಘತಾದಿಂದ ಸಾವೀಗಿಡಾಗಿದ್ದಾಳೆ. ಇವತ್ತು ಸಾವಿನಲ್ಲೂ ಒಂದಾದ ತಾಯಿ ಮಗನ ಇಬ್ಬರ ಅಂತ್ಯಕ್ರಿಯೆಯನ್ನ ನೆರೆವೇರಿಸಲಾಯಿತು.

ಬಯಲು ಬಹಿರ್ದೆಸೆ ಹೋಗುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ

ಯಾದಗಿರಿ: ಬಯಲು ಬಹಿರ್ದೆಸೆ ಹೋಗುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ನಡೆದಿದೆ. ನಮ್ಮ ಮನೆ ಹತ್ತಿರ ಬಹಿರ್ದೆಸೆಗೆ ಯಾಕೆ ಬರ್ತಿರಾ ಎಂದು ರೊಚ್ಚಿಗೆದ್ದು ಹನುಮಂತ, ರಾಮಪ್ಪ ಹಾಗೂ ಲಚಮಪ್ಪ ಸೇರಿ 11 ಜನರು, ಒಂದೆ‌ ಕುಟುಂಬದ ಲಕ್ಷ್ಮಣ್, ಕೃಷ್ಣಮೂರ್ತಿ, ರವಿ, ನಾಗರಾಜ್ ಹಾಗೂ ನಿಂಗಮ್ಮ ಸೇರಿ ಐವರ ಮೇಲೆ ಕೊಡಲಿ, ಕಬ್ಬಿಣದ ರಾಡ್ ಹಾಗೂ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಗಾಯಾಳುಗಳನ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sat, 4 March 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ