ಯಾದಗಿರಿ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospital) ಬೇಜವಾಬ್ದಾರಿ ಪ್ರಕರಣಗಳು ಬೆಳಕಿಗೆ ಬರುತ್ತಲೆ ಇರುತ್ತದೆ. ಅದರಂತೆ ಇದೀಗ ಯಾದಗಿರಿ (Yadgiri )ತಾಲೂಕಿನ ಹೊನಗೇರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿದ ಘಟನೆ ನಡೆದಿದೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿ, ಫೆ.03: ಸರ್ಕಾರಿ ಆಸ್ಪತ್ರೆ(Government Hospital)ಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿದ ಘಟನೆ ಯಾದಗಿರಿ (Yadgiri ) ತಾಲೂಕಿನ ಹೊನಗೇರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ಗರ್ಭಿಣಿ ಹನುಮಂತಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಈ ವೇಳೆ ವೈದ್ಯರು ಮೀಟಿಂಗ್ಗೆ ಹೋದ ಹಿನ್ನಲೆ ಸ್ಟಾಪ್ ನರ್ಸ್ ಹಾಗೂ ಡಿ ಗ್ರೂಪ್ ಸಿಬ್ಬಂದಿಗಳು ಸೇರಿ ಹರಿಗೆ ಮಾಡಿಸಿದ್ದಾರೆ. ಹೀಗೆ ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಕೊನೆಯುಸಿರೆಳೆದಿದೆ. ಇದೀಗ ಮಗು ಸಾವಿಗೆ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಗಂಡು ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ; ಯುವತಿ ಸ್ಥಳದಲ್ಲಿಯೇ ಸಾವು
ಹಾವೇರಿ: ಆಟೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಧಾರುಣ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾವೂರ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಗುಡ್ಡಪ್ಪ ದೇವಗೇರಿ(18) ಮೃತ ದುರ್ದೈವಿ. ಇನ್ನುಳಿದಂತೆ ಆರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಗಾರ್ಮೆಂಟ್ಸ್ ಕೆಲಸಕ್ಕಾಗಿ ಶಿಗ್ಗಾವಿಗೆ ಆಟೋರಿಕ್ಷಾದಲ್ಲಿ ಒಟ್ಟು 7 ಮಹಿಳೆಯರು ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನವಜಾತ ಶಿಶು ಮಾರಾಟ ದಂಧೆ: ಸಿಸಿಬಿ ತನಿಖೆ ವೇಳೆ ಬಯಲಾಯ್ತು ಮತ್ತಷ್ಟು ಭಯಾನಕ ಸತ್ಯ
ಹಾಡಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಖದೀಮನ ಬಂಧನ
ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಾಲೂಕಿನ ಕಲ್ಲೆಹೋಳ ಗ್ರಾಮದ ಪರಶುರಾಮ ನಾನಾ ಗೌಂಡಕರ್ ಬಂಧಿತ ಆರೋಪಿ. ಇನ್ನು ಇತ ಒಟ್ಟು ಹನ್ನೆರಡು ಪ್ರಕರಣದಲ್ಲಿ ಭಾಗಿಯಾಗಿದ್ದ. ಬಂಧಿತನಿಂದ 43ಲಕ್ಷ ಮೌಲ್ಯದ 673ಗ್ರಾಂ ಚಿನ್ನ, 627ಗ್ರಾಂ ಬೆಳ್ಳಿ ಹಾಗೂ 16 ಸಾವಿರ ನಗದನ್ನು ಜಪ್ತಿ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ