Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಲಾರಿ ಡಿಕ್ಕಿ: ಟಾಟಾ ಏಸ್​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ ತಾಲೂಕಿನ ಆರ್.ಹೊಸಳ್ಳಿ ಬಳಿ ತಡರಾತ್ರಿ ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹಳೆ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳು ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಲಾರಿ ಡಿಕ್ಕಿ: ಟಾಟಾ ಏಸ್​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ನುಜ್ಜುಗುಜ್ಜಾದ ವಾಹನ
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on:Nov 27, 2023 | 8:40 AM

ಯಾದಗಿರಿ, ನವೆಂಬರ್​: ಲಾರಿ ಡಿಕ್ಕಿ ಹೊಡೆದ (Lorry collision) ಪರಿಣಾಮ ಟಾಟಾ ಏಸ್​ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಯಾದಗಿರಿ ತಾಲೂಕಿನ ಆರ್.ಹೊಸಳ್ಳಿ ಬಳಿ ತಡರಾತ್ರಿ ನಡೆದಿದೆ. ಮನ್ನು ಚವ್ಹಾಣ್(35), ಹಣಮಂತ(30) ಮೃತರು. ಅಪಘಾತದಲ್ಲಿ ಸಾವಿಗೀಡಾದ ಇಬ್ಬರು ಮುದ್ನಾಳ್ ತಾಂಡಾದ ನಿವಾಸಿಗಳು. ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಳೆ ವೈಷಮ್ಯ: ಎರಡು ಗುಂಪುಗಳು ನಡುವೆ ಮಾರಾಮಾರಿ

ಕೊಪ್ಪಳ: ಹಳೆ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳು ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಗುಂಪ್ಪಿನಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಮಗನ ಸಾವಿನ ಆಘಾತ ತಾಳಲಾರದೆ ಹೃದಯಾಘಾತದಿಂದ ತಾಯಿ ಸಾವು

ಹಲ್ಲೆಯ ವಿಡಿಯೋ ಎಲ್ಲಡೆ ವೈರಲ್ ಆಗಿದೆ. ಶಶಿಧರ್ ಅನ್ನೋ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಕರಡಿ ದಾಳಿ: ಗಾಯಾಳು ಆಸ್ಪತ್ರೆಗೆ ದಾಖಲು

ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಕರಡಿ ದಾಳಿ ಮಾಡಿರುವಂತಹ ಘಟನೆ ಕೊಪ್ಪಳ ತಾಲೂಕಿನ ಇರಕಲಗಡ್ ಗ್ರಾಮದ ಬಳಿ ನಡೆದಿದೆ. ಹೊಸೂರು ಗ್ರಾಮದ ನಿವಾಸಿ ಈರಣ್ಣ ಜಾಲಿಗಿಡ ಕರಡಿ ದಾಳಿಗೆ ಒಳಗಾಗಿರುವವರು.

ಇದನ್ನೂ ಓದಿ: ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ನಿನ್ನೆ ಸಂಜೆ ಹೊಸೂರು ಗ್ರಾಮದಿಂದ ಹುಲಗಿಗೆ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದರು. ಗಾಯಾಳುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

1.5 ಕೆಜಿ ಅಂಬರ್​ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ

ಮಂಗಳೂರು: 1.57 ಕೋಟಿ ರೂ. ಮೌಲ್ಯದ ಅಂಬರ್​​ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪಂಪ್​ವೆಲ್ ಬಳಿ ಮಾರಾಟಕ್ಕೆ ಯತ್ನಿಸಿದ್ದರು. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್ ಅಲಿಯಾಸ್ ಸೇಟು, ಬದ್ರುದ್ದೀನ್ ಅಲಿಯಾಸ್ ಬದ್ರು, ತಮಿಳುನಾಡಿನ ಆರ್.ರಾಜೇಶ್ ಬಂಧಿತರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 am, Mon, 27 November 23

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ