ಯಾದಗಿರಿ: ಬ್ಲೂಟೂತ್ ಬಳಸಿ ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ

ಯಾದಗಿರಿಯಲ್ಲಿ ನಡೆದ KPSC ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ಸಿಕ್ಕಿದೆ. ಪೊಲೀಸರು ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಯಾದಗಿರಿ: ಬ್ಲೂಟೂತ್ ಬಳಸಿ ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ
ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ
Follow us
ಅಮೀನ್​ ಸಾಬ್​
| Updated By: ಆಯೇಷಾ ಬಾನು

Updated on:Oct 28, 2023 | 3:28 PM

ಯಾದಗಿರಿ, ಅ.28: ಪಿಎಸ್‌ಐ ಪರೀಕ್ಷಾ ಹಗರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಇಂದು ರಾಜ್ಯಾದ್ಯಂತ ಕೆಪಿಎಸ್​ಸಿಯ (KPSC Exams) ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿದೆ. ಯಾದಗಿರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ಸಿಕ್ಕಿದೆ. ಪೊಲೀಸರು ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೀನಿಯರ್ ಅಸಿಸ್ಟೆಂಟ್ ಹುದ್ದೆ, ಫುಡ್ ಕ್ಯಾಟಗೇರಿಜೇಷನ್ ಸಿಸ್ಟಮ್ ನ ಸೀನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ರೂ, ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿರುವುದು ಕಂಡು ಬಂದಿದೆ.

ಇನ್ನು ಯಾದಗಿರಿ ಪರೀಕ್ಷೆ ಕೇಂದ್ರದಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಡಿಸಿ ಡಾ.ಸುಶೀಲಾ ಬಿ ಪ್ರತಿಕ್ರಿಯೆ ನೀಡಿದ್ದು ಇಂದು ಮತ್ತು ನಾಳೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡುವ ಮಾಹಿತಿ ಎಸ್ ಪಿ ಗೆ ಬಂದಿದೆ. ಈ ಹಿನ್ನಲೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇಲ್ಲಿವರಗೇ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ. ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ಸದ್ಯ ಬ್ಲೂಟೂತ್ ಬಳಕೆ ಮಾಡಿದ ಆರು ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 6 ಜನರನ್ನು ಠಾಣೆಗೆ ಕರೆ ತಂದ ಬಳಿಕ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದೆ.

ಪೇಪರ್ ನಂಬರ್ 1 ರಲ್ಲಿ ಅಕ್ರಮ ನಡೆದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೇಪರ್ ಎರಡನೇ ಪರೀಕ್ಷೆ ವೇಳೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಮಾಡುತ್ತಿರುವ ಪರೀಕ್ಷಾರ್ಥಿಗಳಿಗೆ ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ. ಮಧ್ಯಾಹ್ನ 2:30 ಕ್ಕೆ ಎರಡನೇ ಪೇಪರ್ ಪರೀಕ್ಷೆ ಆರಂಭವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:06 pm, Sat, 28 October 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ