AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಪ್ರಕರಣ; ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಮಾಜಿ ಸಚಿವ ರಾಜುಗೌಡ ಆರೋಪ

ಯಾದಗಿರಿ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ (PSI Parashuram) ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಪಿಎಸ್​​ಐ ಪತ್ನಿ ಶ್ವೇತಾ ದೂರು ಆಧರಿಸಿ ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಇದೀಗ ಹಲವು ನಾಯಕರು ಕಿಡಿಕಾರಿದ್ದು, ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಪ್ರಕರಣ; ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಮಾಜಿ ಸಚಿವ ರಾಜುಗೌಡ ಆರೋಪ
ಬಿಜೆಪಿ ಮಾಜಿ ಶಾಸಕ ರಾಜುಗೌಡ, ಮೃತ ಪಿಎಸ್​ಐ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 03, 2024 | 3:01 PM

Share

ಬೆಂಗಳೂರು, ಆ.03: ಯಾದಗಿರಿ (Yadgiri) ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ(PSI)ಪರಶುರಾಮ (34) ಇಂದು(ಶನಿವಾರ) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್​ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ಗೃಹ ಸಚಿವರಿಗೆ ಪತ್ರ- JDS ಶಾಸಕ ಶರಣಗೌಡ ಕಂದಕೂರು

ಇನ್ನು ಈ ಕುರಿತು ಯಾದಗಿರಿಯಲ್ಲಿ ಗುರುಮಠಕಲ್ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ‘ಮೂರು ದಿನಗಳ ಹಿಂದೆಯಷ್ಟೇ ವರ್ಗಾವಣೆ ಬಗ್ಗೆ ನನ್ನ ಜತೆ ಮಾತಾಡಿದ್ದ. 1 ವರ್ಷ ಕೂಡ ಆಗಿಲ್ಲ, ಮತ್ತೆ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿದ್ದ. ಮೃತ ಪಿಎಸ್​ಐ ಪರಶುರಾಮ್ ಪತ್ನಿ ಈಗ ತುಂಬು ಗರ್ಭಿಣಿ ಇದ್ದಾರೆ. ಈ ರೀತಿ ಆದರೆ ಪ್ರಾಮಾಣಿಕ ಅಧಿಕಾರಿಗಳು ಏನು ಮಾಡಬೇಕು?. ಸದನದೊಳಗೆ ಮತ್ತು ಹೊರಗೂ ಯಾದಗಿರಿ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಪ್ರಸ್ತಾಪಿಸಿದ್ದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು, ಆದರೂ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ:ಯಾದಗಿರಿ ಪಿಎಸ್​ಐ ಪರಶುರಾಮ ಸಹಜ ಸಾವು ಎಂದ ಪರಮೇಶ್ವರ್​: ಎ1 ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ

ನನ್ನ 2 ತಿಂಗಳ ಸಂಬಳ ಮೃತ ಪರಶುರಾಮ ಕುಟುಂಬಕ್ಕೆ ನೀಡುತ್ತೇನೆ

ಪರಶುರಾಮ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. PSI ಸಾವಿಗೆ ಅಧಿಕಾರಿಗಳು ಹೊಣೆನಾ, ಮೇಲಾಧಿಕಾರಿಗಳು ಹೊಣೆನಾ?. ನಾನು ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್​ಗೆ ಪತ್ರ ಬರೆದಿದ್ದೇನೆ. ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದೇನೆ. ಮೃತ ಪರಶುರಾಮ್ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನನ್ನ 2 ತಿಂಗಳ ಸಂಬಳ ಮೃತ ಪರಶುರಾಮ ಕುಟುಂಬಕ್ಕೆ ನೀಡುತ್ತೇನೆ ಎಂದರು.

ಘಟನೆ ಖಂಡಿಸಿ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್

ಈ ಘಟನೆ ಖಂಡಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್ ಮಾಡಿದ್ದು, ‘ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ, ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು, ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್