AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ydgir News: ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಗೆ ಸಿಗದ ಅಗತ್ಯ ಚಿಕಿತ್ಸೆ, ಹೊಟ್ಟೆಯಲ್ಲಿಯೇ ಶಿಶು ಸಾವು

ಸೋಮವಾರ ಸಂಜೆ ಗರ್ಭಿಣಿ ಲಕ್ಷ್ಮೀಗೆ ಸ್ಕಾನಿಂಗ್ ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿರುವುದು ಪತ್ತೆಯಾಗಿತ್ತು. ನಂತರ ಮೃತ ಶಿಶುವನ್ನು ಶಸ್ತ್ರ ಚಿಕಿತ್ಸೆ ‌ಮೂಲಕ ವೈದ್ಯರು ಹೊರತೆಗೆದಿದ್ದಾರೆ.

Ydgir News: ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಗೆ ಸಿಗದ ಅಗತ್ಯ ಚಿಕಿತ್ಸೆ, ಹೊಟ್ಟೆಯಲ್ಲಿಯೇ ಶಿಶು ಸಾವು
ಕುಟುಂಬದವರು ಹಾಗೂ ಗ್ರಾಮಸ್ಥರು ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
Ganapathi Sharma
|

Updated on:Jun 06, 2023 | 6:30 PM

Share

ಯಾದಗಿರಿ: ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮೀಗೆ ಸರಿಯಾದ ಚಿಕಿತ್ಸೆ ಸಿಗದೆ ಶಿಶು ಹೊಟ್ಟೆಯಲ್ಲಿಯೇ ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಯಾದಗಿರಿ ಜಿಲ್ಲಾಸ್ಪತ್ರೆ (Yadgir District Hospital) ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎಂದು ಕುಟುಂಬದವರು, ಸ್ಥಳೀಯರು ಆರೋಪಿಸಿದ್ದಾರೆ. ಲಕ್ಷ್ಮೀ ಅವರನ್ನು ಮೊದಲು ಹೊನಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಇಲ್ಲ ಎಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಸೋಮವಾರ ಸಂಜೆ ಗರ್ಭಿಣಿ ಲಕ್ಷ್ಮೀಗೆ ಸ್ಕಾನಿಂಗ್ ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿರುವುದು ಪತ್ತೆಯಾಗಿತ್ತು. ನಂತರ ಮೃತ ಶಿಶುವನ್ನು ಶಸ್ತ್ರ ಚಿಕಿತ್ಸೆ ‌ಮೂಲಕ ವೈದ್ಯರು ಹೊರತೆಗೆದಿದ್ದಾರೆ.

ಬಾಣಂತಿ ಲಕ್ಷ್ಮೀಗೆ ಅಗತ್ಯ ಚಿಕಿತ್ಸೆ ಒದಗಿಸಿಲ್ಲವೆಂದು ಆರೋಪಿಸಿ ಆಕೆಯ ಕುಟುಂಬದವರು ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೈದ್ಯರ ನಿರ್ಲಕ್ಷ್ಯತನದಿಂದ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲವೆಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Yadgir News: ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿ ಐವರು ಭಕ್ತರ ಸಾವು

ಈ ಮಧ್ಯೆ, ಆಸ್ಪತ್ರೆಗೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿದ್ದಾರೆ. ಇದೇ ವೇಳೆ, ಶಾಸಕರ ಮುಂದೆ ಗ್ರಾಮಸ್ಥರು ನೋವು ತೊಡಿಕೊಂಡಿದ್ದಾರೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Tue, 6 June 23