ಯಾದಗಿರಿ: ಸರ್ಕಾರಿ ಹುದ್ದೆ ಆಸೆಗೆ ಹೋಗಿ ಜೈಲುಪಾಲಾದ 100 ಎಕರೆ ಜಮೀನ್ದಾರರು

ಕಳೆದ ಕೆಲ ದಿನಗಳ ಹಿಂದೆ ಯಾದಗಿರಿ ಸೇರಿದಂತೆ ರಾಜ್ಯಾದ್ಯಂತ ಕೆಇಎ ನಡೆಸಿದ್ದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿಯಿದ್ದ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು. ಯಾದಗಿರಿ ಜಿಲ್ಲೆಯಲ್ಲೂ 17 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಯಾದಗಿರಿ ನಗರದ 5 ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ನಡೆದಿತ್ತು. ಪ್ರಕರಣದ ಓರ್ವ ಆರೋಪಿ 100 ಎಕರೆ ಜಮೀನು ಹೊಂದಿದ್ದಾನೆ.

ಯಾದಗಿರಿ: ಸರ್ಕಾರಿ ಹುದ್ದೆ ಆಸೆಗೆ ಹೋಗಿ ಜೈಲುಪಾಲಾದ 100 ಎಕರೆ ಜಮೀನ್ದಾರರು
ಬಂಧಿತ ಆರೋಪಿ ಬಾಬುರಾವ್​
Follow us
ಅಮೀನ್​ ಸಾಬ್​
| Updated By: ವಿವೇಕ ಬಿರಾದಾರ

Updated on:Nov 17, 2023 | 7:50 AM

ಯಾದಗಿರಿ ನ.17: ಪಿಎಸ್​ಐ (PSI) ಮತ್ತು ನಿಗಮ ಮಂಡಳಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಇತ್ತೀಚಿಗೆ ಯಾದಗಿರಿಯಲ್ಲಿ (Yadgiri) ನಡೆದ ಎಫ್​ಡಿಎ ಪರೀಕ್ಷಾ ಹಗರಣದಲ್ಲಿ (FDA Exam Scam) ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಅಂಶಗಳು ಬಹಿರಂಗಗೊಂಡಿವೆ. ಅಕ್ರಮದಲ್ಲಿ ಭಾಗಿಯಾಗಿದ್ದ ಮೂವರು ಸಹೋದರರು 100 ಎಕರೆ ಜಮೀನು ಹೊಂದಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಓಂಕಾರ್, ನಾಮಾಕರ್, ಬಾಬುರಾವ್ ಬಂಧಿತ ಆರೋಪಿಗಳು. ಬಾಬುರಾವ್ ಪರೀಕ್ಷಾ ಅಭ್ಯರ್ಥಿ. ಬಾಬುರಾವ್ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್​ನಿಂದ‌ ಬ್ಲೂಟೂತ್ ಪಡೆದು ಪರೀಕ್ಷೆ ಬರೆಯಲು ಮುಂದಾಗಿದ್ದನು. ಬಾಬುರಾವ್​ಗೆ ಸಹೋದರರಾದ ಓಂಕಾರ್, ನಾಮಾಕರ್ ಸಹಾಯಕರಾಗಿದ್ದರು. ಅಣ್ಣ ಬಾಬುರಾವ್ ಕೊಠಡಿಯೊಳಗೆ ಪರೀಕ್ಷೆ ಬರೆಯುತ್ತಿದ್ದರೇ, ತಮ್ಮಂದಿರಾದ ಓಂಕಾರ್ ಹಾಗೂ ನಾಮಕರಾರ್ ಹೊರಗಿನಿಂದ ಅಣ್ಣನಿಗೆ ಸಹಾಯ ಮಾಡುತ್ತಿದ್ದರು. ಆದರೆ ಇದು ನಡೆಯಲಿಲ್ಲ. ಬಾಬುರಾವ್ ಪರೀಕ್ಷೆಯಲ್ಲಿ ಪಾಸ್ ಆಗಿ ನೌಕರಿ ಪಡೆದ ಬಳಿಕ ಆರ್.ಡಿ ಪಾಟೀಲ್​ಗೆ ಹಣ ಕೊಡುವುದಾಗಿ ಒಪ್ಪಿಕೊಂಡಿದ್ದನು. ಸ್ವಂತ 100 ಎಕರೆ ಜಮೀನು ಇದ್ದರೂ ಅಕ್ರಮವಾಗಿ ಪರೀಕ್ಷೆ ಬರೆಯಲು ಹೋಗಿ ಬಾಬುರಾವ್​​​ ಮತ್ತು ಆತನ ಇಬ್ಬರು ಸಹೋದರರು ಕಂಬಿ ಎಣಿಸುತ್ತಿದ್ದಾರೆ.

ಏನಿದು ಎಫ್​ಡಿಎ ಪರೀಕ್ಷಾ ಅಕ್ರಮ

ಕಳೆದ ಕೆಲ ದಿನಗಳ ಹಿಂದೆ ಯಾದಗಿರಿ ಸೇರಿದಂತೆ ರಾಜ್ಯಾದ್ಯಂತ ಕೆಇಎ ನಡೆಸಿದ್ದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿಯಿದ್ದ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು. ಯಾದಗಿರಿ ಜಿಲ್ಲೆಯಲ್ಲೂ 17 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಯಾದಗಿರಿ ನಗರದ 5 ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ನಡೆದಿತ್ತು. ಪರೀಕ್ಷಾರ್ಥಿಗಳು ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದರು.

ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ‌‌

ತಕ್ಷಣ ಮಾಹಿತಿ ಪಡೆದ ಪೊಲೀಸರು ಐದು ಸೆಂಟರ್ ಗಳ ಮೇಲೆ ದಾಳಿ 9 ಜನರನ್ನ ವಶಕ್ಕೆ ಪಡೆದು ಬಂಧಿಸಿದ್ದರು. ಬಳಿಕ ವಿಚಾರಣೆ ನಡೆಸಿದ ಪೊಲೀಸರು ನೇರವಾಗಿ ನ್ಯಾಯಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಈ 9 ಜನರಿಗೆ ಹೊರಗಿದ್ದು ಉತ್ತರ ಹೇಳುತ್ತಿದ್ದ 7 ಜನರಿಗೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ ಕಡಿಮೆ ಅವಧಿಯಲ್ಲಿ ಪರಿಪೂರ್ಣವಾಗಿ ತನಿಖೆ ನಡೆಸಲು ಸಾಧ್ಯವಾಗದ ಕಾರಣಕ್ಕೆ ಪೊಲೀಸರು ತಮ್ಮ ಕಸ್ಟಡಿಗೆ ಆರೋಪಿಗಳನ್ನ ನೀಡುವಂತೆ ಸಿಜೆಎಂ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪರೀಕ್ಷೆ ಬರೆಯುತ್ತಿದ್ದ 9 ಜನರಿಗೆ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ನ್ಯಾಯಧೀಶರು 9 ಜನರಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Fri, 17 November 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ