AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಹಾಸ್ಟೆಲ್​ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಓಪನ್! ಲಂಚದ ಆಸೆಗೆ ಬಿದ್ದು ಸರ್ಕಾರಿ ಕಟ್ಟಡ ಬಾಡಿಗೆ ನೀಡಿದ್ರಾ ಅಧಿಕಾರಿಗಳು?

ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ನಡೆಸಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್ ಕಟ್ಟಡವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು, ಬೇಸಿಗೆ ಶಿಬಿರದ ಹೆಸರಿನಲ್ಲಿ ಹೊರಗಿನ ಮಕ್ಕಳಿಂದಲೂ ಪ್ರತಿ ತಿಂಗಳು 5 ಸಾವಿರ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸರ್ಕಾರಿ ಹಾಸ್ಟೆಲ್​ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಓಪನ್! ಲಂಚದ ಆಸೆಗೆ ಬಿದ್ದು ಸರ್ಕಾರಿ ಕಟ್ಟಡ ಬಾಡಿಗೆ ನೀಡಿದ್ರಾ ಅಧಿಕಾರಿಗಳು?
ಸರ್ಕಾರಿ ಹಾಸ್ಟೆಲ್ ನಲ್ಲಿ ಕೋಚಿಂಗ್ ಸೆಂಟರ್ ಓಪನ್!
ಅಮೀನ್​ ಸಾಬ್​
| Edited By: |

Updated on: Apr 21, 2026 | 11:16 AM

Share

ಯಾದಗಿರಿ, ಏಪ್ರಿಲ್ 21: ಜಿಲ್ಲೆಯಲ್ಲಿ ಸರ್ಕಾರಿ ಕಟ್ಟಡದ ದುರುಪಯೋಗಪಡಿಸಿಕೊಂಡ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಯಾದಗಿರಿ (Yadgir) ತಾಲೂಕಿನ ಲಿಂಗೇರಿ ಸ್ಟೇಷನ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ಆರಂಭಿಸಿರುವ ಆರೋಪ ಕೇಳಿಬಂದಿದೆ.

ಪ್ರತಿ ತಿಂಗಳು ತಲಾ 5 ಸಾವಿರ ರೂ ಶುಲ್ಕ!

ದೇವಿಂದ್ರಪ್ಪ ಎಂಬಾತ ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್ ಕಟ್ಟಡವನ್ನು ಬಾಡಿಗೆ ಪಡೆದು ಬೇಸಿಗೆ ಶಿಬಿರದ ಹೆಸರಿನಲ್ಲಿ ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ಕೋಚಿಂಗ್ ನೀಡುತ್ತಿದ್ದಾನೆ ಎಂಬ ಆರೋಪವಿದೆ. ಹಾಸ್ಟೆಲ್ ಮಕ್ಕಳಿಗೆ ಮಾತ್ರವಲ್ಲದೆ ಹೊರಗಿನ ಮಕ್ಕಳಿಂದಲೂ ಪ್ರತಿ ತಿಂಗಳು ತಲಾ 5 ಸಾವಿರ ರೂಪಾಯಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ ವೇಳೆಯೂ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಕೊಠಡಿಗಳಲ್ಲಿ ಉಳಿಸಲಾಗುತ್ತಿದೆ ಎಂಬ ಆರೋಪವೂ ಇದೆ.

ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ

ಸಾಮಾಜಿಕ ಕಾರ್ಯಕರ್ತ ಉಮೇಶ್ ಹಾಗೂ ಸ್ಥಳೀಯ ನಾಗರಾಜ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರಿ ಕಟ್ಟಡವನ್ನು ದುರುಪಯೋಗ ಪಡಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​