AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನು ವಿವಾದಕ್ಕೆ ಯುವಕನೊಬ್ಬನ ಭೀಕರ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರವಾಗಿ ಕೊಲೆಯಾದವನ ಸಹೋದರ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಗಳಿಂದ ಕುಟುಂಬಗಳು ಬೀದಿಪಾಲಾಗಿವೆ. ಪೊಲೀಸರು ಕೊಲೆ ಹಾಗೂ ಅಗ್ನಿಕಾಂಡದ ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಕ್ರಮ ಜರುಗಿಸಿದ್ದಾರೆ.

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ!
ಸಾಂದರ್ಭಿಕ ಚಿತ್ರ
ಅಮೀನ್​ ಸಾಬ್​
| Edited By: |

Updated on: Apr 14, 2026 | 1:51 PM

Share

ಯಾದಗಿರಿ, ಏ.14: ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನಿಗಾಗಿ ಶುರುವಾದ ಜಗಳ ಈಗ ಹತ್ತಾರು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದೆ. ಜಮೀನು ವಿವಾದಕ್ಕೆ ಯುವಕನೋರ್ವನ ಭೀಕರ ಕೊಲೆಯಾಗಿದ್ದರೆ, ಅದರ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಕೊಲೆಯಾದವನ ಸಹೋದರ ಕೂಡ ಈಗ ಜೈಲು ಪಾಲಾಗಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ ಕುಟುಂಬಗಳ ಮಧ್ಯೆ ಕಳೆದ ನಾಲ್ಕು ವರ್ಷಗಳಿಂದ 2 ಎಕರೆ ಜಮೀನಿನ ದಾರಿ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಹನುಮಂತರಾಯನ ಕುಟುಂಬ ಮತ್ತು ಸಂಬಂಧಿಕರು ಸೇರಿ 27 ವರ್ಷದ ಪರಮೇಶ್ವರ ಎಂಬಾತನನ್ನು ತಲ್ವಾರ್ ಮತ್ತು ದೊಣ್ಣೆಗಳಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದರು. ಈ ವೇಳೆ ಅಣ್ಣನನ್ನು ಕಾಪಾಡಲು ಹೋದ ರೇವಣಸಿದ್ದನಿಗೂ ಗಂಭೀರ ಗಾಯಗಳಾಗಿದ್ದವು. ಘಟನೆ ನಡೆದ ಒಂದೇ ದಿನದಲ್ಲಿ ಕೆಂಭಾವಿ ಪೊಲೀಸರು ಪ್ರಮುಖ ಆರೋಪಿಗಳಾದ ಪರಮಣ್ಣ, ದೇವಿಂದ್ರಪ್ಪ, ಚನ್ನಪ್ಪ ಮತ್ತು ಮಹಾದೇವಪ್ಪ ಸೇರಿ ನಾಲ್ವರನ್ನು ಬಂಧಿಸಿದ್ದರು.

ಇದನ್ನೂ ಓದಿ: ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ

ಅಣ್ಣನ ಸಾವಿನಿಂದ ಕೆರಳಿದ್ದ ಸಹೋದರ ರೇವಣಸಿದ್ದ, ಆರೋಪಿಗಳ ಕುಟುಂಬ ಊರು ಬಿಟ್ಟಿದ್ದ ಸಮಯ ಸಾಧಿಸಿ ಅವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಅಗ್ನಿಕಾಂಡದಲ್ಲಿ ಮನೆಯಲ್ಲಿದ್ದ ಧಾನ್ಯಗಳು, ಬಟ್ಟೆ ಬರೆ ಸೇರಿ ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ರೇವಣಸಿದ್ದನನ್ನು ಕೂಡ ಪೊಲೀಸರು ಬಂಧಿಸಿದ್ದು, ಅಣ್ಣನ ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬದ ಮತ್ತೊಬ್ಬ ಸದಸ್ಯ ಈಗ ಕಂಬಿ ಎಣಿಸುವಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?