AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

ಅನ್ನಭಾಗ್ಯ ಅಕ್ಕಿ ತುಂಬಿದ್ದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಯಾರ್ಡ್​​ನಲ್ಲಿ ನಡೆದಿದೆ.

Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!
ಕಳವಾಗಿರುವ ಲಾರಿ
Ganapathi Sharma
|

Updated on:May 31, 2023 | 8:09 PM

Share

ಯಾದಗಿರಿ: ಅನ್ನಭಾಗ್ಯ ಅಕ್ಕಿ (Anna Bhagya Yojana) ತುಂಬಿದ್ದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಯಾರ್ಡ್​​ನಲ್ಲಿ (APMC Market Shahapur Complex) ನಡೆದಿದೆ. ನ್ಯಾಯ ಬೆಲೆ ಅಂಗಡಿಗೆ ಸಾಗಿಸಲು ಎಪಿಎಂಸಿ ಯಾರ್ಡ್​​ನಲ್ಲಿ ಅಕ್ಕಿ ತುಂಬಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಲಾರಿಯಲ್ಲಿ 20 ಟನ್ ಅಕ್ಕಿಯ 420 ಚೀಲಗಳಿದ್ದವು. ಲಾರಿ ಕಳವಿಗೆ ಅಧಿಕಾರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಪರಿಣಾಮವಾಗಿ ಬಡವರ ಹೊಟ್ಟೆ ತುಂಬಲು ಬಳಕೆಯಾಗಬೇಕಿದ್ದ ಅಕ್ಕಿ ಕಳ್ಳರ ಪಾಲಾಗಿದೆ.

ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಹಾಪುರ ಠಾಣೆಯ ಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಕಳ್ಳತನವಾಗಿದ್ದ 16 ವಶಪಡಿಸಿದ ಪೊಲೀಸರು

ಇತ್ತೀಚೆಗೆ ಕಳವಾಗಿದ್ದ 16 ಮೊಬೈಲ್ ಫೋನ್​​ಗಳನ್ನು ಪೊಲೀಸರು ಹುಡುಕಿಕೊಟ್ಟಿದ್ದಾರೆ. ಮೊಬೈಲ್ ಕಳ್ಳತನ ಬಗ್ಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಕೇಸ್ ದಾಖಲಿಸಿಕೊಂಡ ಬಳಿಕ ಮೊಬೈಲ್ ಫೋನ್​​ಗಳನ್ನ ಪತ್ತೆ ಹಚ್ಚಿದ ಪೊಲೀಸರು ಬುಧವಾರ ಎಸ್​​ಪಿ ಕಚೇರಿಗೆ ಕರೆದು ವಾರಸುದಾರರಿಗೆ ಫೋನ್ ವಾಪಸ್ ನೀಡಿದರು. ಯಾದಗಿರಿ ಎಸ್​​ಪಿ ಡಾ ಸಿಬಿ ವೇದಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಇನ್ನೂ ಸಾಕಷ್ಟು ಮೊಬೈಲ್ ಕಳ್ಳತನದ ಬಗ್ಗೆ ಕೇಸ್ ದಾಖಲಾಗಿದ್ದು ಹುಡುಕಿಕೊಡುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಯಾದಗಿರಿ ತಾಲೂಕಿನಲ್ಲಿ ಧಾರಾಕಾರ ಮಳೆ

ಯಾದಗಿರಿ ತಾಲೂಕಿನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, 4 ಮನೆಗಳ ಮೇಲ್ಚಾವಣಿ ಹಾರಿಹೋಗಿದೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮನೆಯಲ್ಲಿದ್ದ ದಿನಬಳಕೆ ವಸ್ತುಗಳು, ದವಸ ಧಾನ್ಯ ನೀರುಪಾಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Wed, 31 May 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು