ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ

ಹಿಂದಿನ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಎಸಗಿದ್ದ ಪ್ರಕರಣವನ್ನು ಬಯಲಿಗೆಳೆದ ಯಾದಗಿರಿ ನಗರಸಭೆ ಪೌರಾಯುಕ್ತರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಕಚೇರಿ ಬಳಿ ಪ್ರತಿದಿನ ಅನಾಮಿಕ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಆರೋಪಿಸಿ ರಕ್ಷಣೆ ನೀಡುವಂತೆ ಪೌರಾಯುಕ್ತ ಸಂಗಪ್ಪ ಉಪಾಸೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ
ಯಾದಗಿರಿ ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on: Aug 22, 2023 | 12:12 PM

ಯಾದಗಿರಿ, ಆಗಸ್ಟ್ 22: ನಗರಸಭೆ (Yadgir Municipal Corporation) ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುಲಾರಂಭಿಸಿದ್ದು, ರಕ್ಷಣೆ ಕೋರಿ ಉಪಾಸೆ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಹಿಂದಿನ ಅಧಿಕಾರಿಗಳ ಅಕ್ರಮ ಬಯಲಿಗೆಳೆದಿದ ನಂತರ ಸಂಗಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ಕಚೇರಿ ಬಳಿ ಪ್ರತಿನಿತ್ಯ ಅನಾಮಿಕ ವ್ಯಕ್ತಿಗಳು ಓಡಾಡಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಕಲಿ‌ ದಾಖಲಗಳನ್ನು ಸೃಷ್ಟಿಸಿ ಕೃಷಿ ಭೂಮಿಯಲ್ಲಿ 1,310 ಖಾತಾ ನೀಡಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಆಗಿರುವುದನ್ನು ಪೌರಾಯುಕ್ತ ಸಂಗಪ್ಪ ಅವರು ಪತ್ತೆ ಹಚ್ಚಿದ್ದರು. ಅಲ್ಲದೇ ನಾಲ್ಕು ಕೋಟಿ ಮೌಲ್ಯದ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿದ್ದನ್ನ ಬಯಲಿಗೆ ಎಳೆದಿದ್ದರು.

ಇದನ್ನೂ ಓದಿ: ಯಾದಗಿರಿ: ನಕಲಿ ದಾಖಲೆ ಸೃಷ್ಟಿಸಿ 18ಕೋಟಿ ರೂ. ಮೌಲ್ಯದ ಸರ್ಕಾರಿ ಆಸ್ತಿ ಪರಭಾರೆ, ನೋಟಿಸ್ ಜಾರಿ

ಇದೇ ಪ್ರಕರಣ ಸಂಬಂಧ ನಗರಸಭೆ ಸದಸ್ಯೆಯ ಪತಿ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಹೆಸರು ಪ್ರಸ್ತಾಪಿಸಿದ್ದರು. ಇದೇ ಕಾರಣಕ್ಕೆ ನಿತ್ಯವೂ ಅನಾಮಿಕ ವ್ಯಕ್ತಿಗಳು ಕಚೇರಿ ಸುತ್ತವೂ ಓಡುತ್ತಿದ್ದಾರೆ. ರಾತ್ರಿ ವೇಳೆ ಬೇದರಿಕೆ ಕರೆಗಳು ಬರುತ್ತಿವೆ. ನನ್ನ ತೇಜೋವಧೆ ಮಾಡುವುದಲ್ಲದೇ, ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಪೌರಾಯಕ್ತ ಸಂಗಪ್ಪ ಉಪಾಸೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ