AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ 76 ವರ್ಷದ ವೃದ್ಧ ಹಂಪಣ್ಣ ಸಜ್ಜನರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಲಾಗಿದೆ. ಜಮೀನಿನಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಂಪಣ್ಣ ಅವರು ಅನೈತಿಕ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಇದೇ ಕಾರಣಕ್ಕೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ
ಒಬ್ಬಂಟಿಯಾಗಿದ್ದ ವೃದ್ಧನ ಭೀಕರವಾಗಿ ಹತ್ಯೆ
ಅಮೀನ್​ ಸಾಬ್​
| Edited By: |

Updated on:Mar 14, 2026 | 9:35 AM

Share

ವಡಗೇರ, ಮಾ.14: ತನ್ನ ಪಾಡಿಗೆ ತಾನು ಜಮೀನಿನಲ್ಲಿ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. 76 ವರ್ಷದ ಹಂಪಣ್ಣ ಸಜ್ಜನ ಕೊಲೆಯಾದ ದುರ್ದೈವಿ. ಹಂಪಣ್ಣ ಸಜ್ಜನ ಅವರಿಗೆ ಮೂವರು ಗಂಡು ಮಕ್ಕಳಿದ್ದು, 15 ವರ್ಷಗಳ ಹಿಂದೆಯೇ ಆಸ್ತಿ ಹಂಚಿಕೆ ಮಾಡಿ ತನಗಾಗಿ 12 ಎಕರೆ ಜಮೀನು ಉಳಿಸಿಕೊಂಡಿದ್ದರು. 12 ವರ್ಷಗಳ ಹಿಂದೆ ಪತ್ನಿ ನಿಧನರಾದ ಬಳಿಕ, ಮಕ್ಕಳು ಗ್ರಾಮದಲ್ಲಿದ್ದರೂ ಹಂಪಣ್ಣ ಜಮೀನಿನಲ್ಲಿ ಪುಟ್ಟ ಮನೆ ನಿರ್ಮಿಸಿಕೊಂಡು ಒಬ್ಬಂಟಿಯಾಗಿ ವಾಸವಿದ್ದರು.

ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಹಂಪಣ್ಣ ಮಲಗಿದ್ದಾಗ ಕಲ್ಲಿನಿಂದ ತಲೆ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಗ್ರಾಮಕ್ಕೆ ಹಾಲು ಪಡೆಯಲು ವೃದ್ಧ ಬಾರದಿದ್ದಾಗ ಅನುಮಾನಗೊಂಡು ಜಮೀನಿಗೆ ಹೋಗಿ ನೋಡಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ವಡಗೇರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಪ್ರಾಥಮಿಕ ತನಿಖೆಯ ವೇಳೆ, ಹಂಪಣ್ಣ ಅವರು ಪರ ಸ್ತ್ರೀಯರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಂದ ಲಭ್ಯವಾಗಿದೆ. ಇದೇ ಕಾರಣಕ್ಕೆ ದ್ವೇಷ ಸಾಧಿಸಿ ಕೊಲೆ ಮಾಡಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಾದಗಿರಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:34 am, Sat, 14 March 26

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ