AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಪಲ್ಟಿ: ಚಾಲಕನಿಗೆ ಗಾಯ

ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

Yadgir News: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಪಲ್ಟಿ: ಚಾಲಕನಿಗೆ ಗಾಯ
ಪಲ್ಟಿಯಾದ ಆ್ಯಂಬುಲೆನ್ಸ್
ಅಮೀನ್​ ಸಾಬ್​
| Edited By: |

Updated on:Jul 30, 2023 | 5:42 PM

Share

ಯಾದಗಿರಿ, ಜುಲೈ 30: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ (​Ambulance) ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರು. ಹಾಗಾಗಿ ಬೆಂಗಳೂರಿನಿಂದ ಕಲಬುರಗಿಗೆ ಮೃತದೇಹ ಸಾಗಿಸುವಾಗ ಅವಘಡ ಸಂಭವಿಸಿದೆ.

ಚಾಲಕನನ್ನು ಬಿಟ್ಟು ಇತರರು ಅದೃಷ್ಟವಶಾತ್​ ಪಾರಾಗಿದ್ದಾರೆ. ಘಟನೆ ಬಳಿಕ ಬೇರೆ ವಾಹನದಲ್ಲಿ ಕುಟುಂಬಸ್ಥರು ಶವ ಸಾಗಿಸಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸಾರ್ವಜನಿಕರೊಂದಿಗೆ ಮಂಗಳಮುಖಿಯರ ಕಿರಿಕಿರಿ: ವಶಕ್ಕೆ ಪಡೆದ ಪೊಲೀಸರು

ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಗುಂಡಿಗೆ ಬಿದ್ದ ಕಾರು: 9 ಮಂದಿ ಗಂಭೀರ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಗುಂಡಿಗೆ ಕಾರು ಬಿದಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ಮನೆಯ ಸಮೀಪಕ್ಕೆ ಕಾರು ಬಿದಿದ್ದು, ಮನೆಯವರು ಜಸ್ಟ್ ಮಿಸ್​ ಆಗಿದ್ದಾರೆ. ಗಂಭೀರ ಗಾಯಳುಗಳನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ. ಕೋಲಾರದಿಂದ ಹೊರನಾಡಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇ.ಡಿ.

ಜಲ್ಲಿಕ್ರಷರ್​ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಪೆರೇಸಂದ್ರ ಬಳಿಯ ಜಲ್ಲಿ ಕ್ರಷರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ತಿಕ್ (20) ಮೃತ ದುರ್ದೈವಿ. ಸಂತೋಷ್ ಪಾಟೀಲ್ ಎನ್ನುವವರಿಗೆ ಜಯ್ ಕ್ರಷರ್ಸ್ ಸೇರಿದೆ. ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳದ‌ ಕಾರಣ ದುರಂತ ಸಂಭವಿಸಿದೆ. ಕ್ರಷರ್ಸ್ ಮಾಲಿಕರ ನಿರ್ಲಕ್ಷ್ಯದಿಂದ ಕಾರ್ಮಿಕ ಮೃತಪಟ್ಟಿದ್ದು, ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:31 pm, Sun, 30 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್