ಚಲಿಸುತ್ತಿದ್ದ ಆ್ಯಂಬುಲೆನ್ಸ್​ ಟೈಯರ್ ಸ್ಫೋಟ: ರೋಗಿ, ಸಂಬಂಧಿಕರು ಪರದಾಟ

Yadgir News: ಚಲಿಸುತ್ತಿದ್ದ ಆ್ಯಂಬುಲೆನ್ಸ್​ ಟೈಯರ್ ಸ್ಫೋಟಗೊಂಡು ರೋಗಿ ಮತ್ತು ಸಂಬಂಧಿಕರು ಪರದಾಡಿರುವಂತಹ ಘಟನೆ ವಿಜಯಪುರ ಜಿಲ್ಲೆಯ ಶೆಳ್ಳಗಿ ಗ್ರಾಮದ ಬಳಿ ನಡೆದಿದೆ. ಕೆಂಭಾವಿಯಿಂದ ವಿಜಯಪುರಕ್ಕೆ ಆ್ಯಂಬುಲೆನ್ಸ್​ನಲ್ಲಿ ರೋಗಿಯನ್ನು ಕರೆದು ಕೊಂಡು ಹೋಗುವ ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ಹಿಂಬದಿಯ ಟೈಯರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. 

ಚಲಿಸುತ್ತಿದ್ದ ಆ್ಯಂಬುಲೆನ್ಸ್​ ಟೈಯರ್ ಸ್ಫೋಟ: ರೋಗಿ, ಸಂಬಂಧಿಕರು ಪರದಾಟ
ಟೈಯರ್ ಸ್ಫೋಟಗೊಂಡ ಆ್ಯಂಬುಲೆನ್ಸ್
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2023 | 5:41 PM

ಯಾದಗಿರಿ, ಆಗಸ್ಟ್​ 04: ವಿಜಯಪುರ ಜಿಲ್ಲೆಯ ಶೆಳ್ಳಗಿ ಬಳಿ ಚಲಿಸುತ್ತಿದ್ದ ಆ್ಯಂಬುಲೆನ್ಸ್ (Ambulance)​ ಟೈಯರ್ ಸ್ಫೋಟಗೊಂಡು ರೋಗಿ ಮತ್ತು ಸಂಬಂಧಿಕರು ಪರದಾಡಿರುವಂತಹ ಘಟನೆ ನಡೆದಿದೆ. ಕೆಂಭಾವಿಯಿಂದ ವಿಜಯಪುರಕ್ಕೆ ಆ್ಯಂಬುಲೆನ್ಸ್ ವಾಹನ ತೆರಳುತ್ತಿದ್ದು, ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ಹಿಂಬದಿಯ ಟೈಯರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುರಪುರ ತಾಲೂಕಿನ ಪರಸನಹಳ್ಳಿಯ ರೋಗಿ ಸೋಮನಗೌಡರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಸದ್ಯ ಆ್ಯಂಬುಲೆನ್ಸ್ ಕೈಕೊಟ್ಟಿದ್ದಕ್ಕೆ ರೋಗಿ ಸಂಬಂಧಿಕರು ಪರದಾಡಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಬಟನ್ ರೋಸ್ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ ಹೊಸೂರು ಗ್ರಾಮದ ರೈತ

ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಳೆಯನ್ನ ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಹೆರಿಗೆ ಆಗಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಗ್ರಾಮದ ನೀಲಮ್ಮ ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ನೋವಿನಿಂದ ಬಳಲುತ್ತಿದ್ದರು.

ಗ್ರಾಮಕ್ಕೆ ಬಂದಿದ್ದ ಆ್ಯಂಬುಲೆನ್ಸ್ ಮೂಲಕ ಹುಣಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿ ನೋವು ಕಾಣಿಸಿಕೊಂಡ ಕಾರಣಕ್ಕೆ ಸ್ಟಾಪ್ ನರ್ಸ್ ವಿಶ್ವನಾಥ್ ಹಾಗೂ ಸಿಬ್ಬಂದಿ ರಾಜಶೇಖರ್ ಸೇರಿ ಮಹಿಳೆಯನ್ನ ಸುರಕ್ಷಿತವಾಗಿ ಹೆರಿಗೆಯನ್ನ ಮಾಡಿದ್ದರು. ನೀಲಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಹುಣಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ

ಸರ್ಕಾರಿ ಆ್ಯಂಬುಲೆನ್ಸ್​ನಲ್ಲಿ ಕಳಿಸಲು ವೈದ್ದರಿಂದ ಲಂಚ ಬೇಡಿಕೆ ಆರೋಪ

ಚಿಕ್ಕಬಳ್ಳಾಪುರ: ಒಂದು ಸರ್ಕಾರಿ ಆಸ್ಪತ್ರೆಯಿಂದ ಇನ್ನೊಂದು ಸರ್ಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ರೋಗಿಯನ್ನು ಸಾಗಿಸಲು ಆಸ್ಪತ್ರೆಯ ವೈದ್ಯರು 1500 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವಂತಹ ಘಟನೆ ಇತ್ತೀಚೆಗೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದಿತ್ತು.

ಅಮರನಾರಾಯಣ ಎನ್ನುವಾತ ಮೂರ್ಚೆ ರೋಗದಿಂದ ಬಳಲುತ್ತಿದ್ದು ರಾತ್ರಿ 8 ಗಂಟೆ ಸಮಯದಲ್ಲಿ ತೀವ್ರ ಅಸ್ಪಸ್ಥನಾಗಿ ಚಿಂತಾಮಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯ ವೈದ್ಯ ಡಾ. ಜಯರಾಮ್ ತುರ್ತು ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಸೂಚಿಸಿದ್ದರು. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ರೋಗಿಯನ್ನ ಕಳಿಸಲು 1500 ಹಣ ಕೊಟ್ಟು ವಾಹನಕ್ಕೆ ಡೀಸೆಲ್‌ ಹಾಕಿಸುವಂತೆ ಬೇಡಿಕೆ ಇಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ