PM Modi Death Threat: ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣ ಫೇಸ್​ಬುಕ್​ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ರಸೂಲ್​ ಕಡ್ಡಾರೆಯನ್ನು ಸುರಪುರ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕುಡಿದ ಅಮಲಿನಲ್ಲಿ ಬೆದರಿಕೆ ಹಾಕಿದ್ದಾಗಿ ಹೇಳಿದ್ದಾನೆ.

PM Modi Death Threat: ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
ಪ್ರಧಾನಿ ಮೋದಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್​​​
Edited By:

Updated on: Mar 05, 2024 | 11:50 AM

ಯಾದಗಿರಿ, ಮಾರ್ಚ್​ 05: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​​ ಅವರಿಗೆ ಜಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರುಪುರ ಠಾಣೆ ಪೊಲೀಸರು (Surapur Police) ತಡರಾತ್ರಿ ಬಂಧಿಸಿದ್ದಾರೆ. ಮೊಹಮ್ಮದ್ ರಸೂಲ್ ಕಡ್ದಾರೆ (45) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್​ನಲ್ಲಿ ಕೂಲಿ ಮಾಡುತ್ತಿದ್ದನು.

ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ? ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ನಿಮ್ಮಂತಹ ಕೆಟ್ಟ ಆಡಳಿತ ಮಾಡಿಲ್ಲ. ನೀನು ಟೀ ಮಾರಾಟ ಮಾಡುತ್ತಿದ್ದೆ. ಪಕ್ಷ ಬಿಟ್ಟು ನನ್ನ ಜೊತೆ ಜಗಳಕ್ಕೆ ಬಾ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರಗಳು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್​” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಫೇಸ್​ಬುಕ್​ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದನು.

ಇದನ್ನೂ ಓದಿ: ನನಗೆ ಜೀವ ಬೆದರಿಕೆ ಇತ್ತು ಎಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಆರೋಪಿ ರಸೂಲ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು. ಈ ವಿಡಿಯೋ ಕಂಡ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಶರಣು ನಾಯಕ ಸುರುಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ 505(1) (ಬಿ), 25(1)(ಬಿ) ಹಾಗೂ ಆರ್ಮ್ಸ್ ಕಾಯ್ದೆಯಡಿ ಪ್ರಕಣ ದಾಖಲಾಗಿತ್ತು. ಆರೋಪಿ ರಸೂಲ್​ಗಾಗಿ ಪೊಲೀಸರು ಬಲೆ ಬೀಸಿದ್ದರು. ನಿನ್ನೆ (ಮಾ.04) ರಂದು ರಸೂಲ್​ ಯಾದಗಿರಿಗೆ ಬಂದಿದ್ದನು. ವಿಚಾರ ತಿಳಿದು ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ರಸೂಲ್​ನನ್ನು ವಿಚಾರಣೆಗೆ ಒಳಪಡಿಸಿದಾಗ, ಕುಡಿದ ಅಮಲಿನಲ್ಲಿ ನಿಂದಿಸಿ ಬೆದರಿಕೆ ಹಾಕಿದ್ದಾಗಿ ಹೇಳಿದ್ದಾನೆ.

ಈ ಹಿಂದೆಯೂ ಜೀವ ಬೆದರಿಕೆ ಹಾಕಲಾಗಿತ್ತು

ಈ ಇಬ್ಬರು ನಾಯಕರನ್ನು ಕೊಲ್ಲುವುದಾಗಿ 2023ರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿದ್ದನು. ಅಲ್ಲದೆ ತಾನು ದಾವೂದ್ ಇಬ್ರಾಹಿಂ ಮಾಫಿಯಾ ಗ್ಯಾಂಗ್​ಗೆ ಸೇರಿದವನು ಎಂದು ಹೇಳಿಕೊಂಡಿದ್ದನು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಪೋನ್​ ಬಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ