ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ

"ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ" ಎಂದು ಹೇಳಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಯಾದಗಿರಿ: ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ, ಪ್ರಚೋದನಕಾರಿ ರೀಲ್ಸ್ ಮಾಡುತ್ತಿದ್ದ ಇಬ್ಬರ ಬಂಧನ
ಅಕ್ಬರ್ ಸೈಯದ್ ಬಹದ್ದೂರ್ ಅಲಿ, ಮೊಹಮ್ಮದ್ ಅಯಾಜ್
Follow us
TV9 Web
| Updated By: ಆಯೇಷಾ ಬಾನು

Updated on:Aug 09, 2023 | 12:59 PM

ಯಾದಗಿರಿ, ಆ.09: ‘ಮಹಮ್ಮದ್‌ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರನ್ನು, ಅವಮಾನ ಮಾಡಿದವರ ತಲೆ ಕಡೆಯಿರಿ’ ಎಂಬ ಪ್ರಚೋದನಕಾರಿ ಸಂದೇಶದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಯಾದಗಿರಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯಾದಗಿರಿ ಗ್ರಾಮಾಂತರ ಠಾಣೆಯ ‍ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆಶನಾಳ ಗ್ರಾಮದ ಅಕ್ಬರ್ ಸೈಯದ್ ಬಹದ್ದೂರ್ ಅಲಿ (23), ಹತ್ತಿಕುಣಿ ಕ್ರಾಸ್‌ ನಿವಾಸಿ ಮೊಹಮ್ಮದ್ ಅಯಾಜ್ (21) ಬಂಧಿತರು.

ಮೂರು ದಿನಗಳ ಹಿಂದೆ ಸೈಯದ್ ಅಲಿ ಅಕ್ಬರ್ ಜಾಗೀರದಾರ್ ಎಂಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದ್ದ. ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ, ಸೈಯದ್ “ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡಿ” ಎಂದು ಹೇಳಿದ್ದ. ಮತ್ತೊಂದು ವಿಡಿಯೋದಲ್ಲಿ, “ಕುರಾನ್ ಪ್ರಕಾರ ಕಾಫಿರರಿಗೆ(ಅನ್ಯ ಧರ್ಮಿಯರು) ಇರುವ ಏಕೈಕ ಸ್ಥಳವೆಂದರೆ ನರಕ” ಎಂದು ಹೇಳಿದ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಚೋದನಕಾರಿ ವಿಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಸದ್ಯ ಯಾದಗಿರಿ ಜಿಲ್ಲಾ ಪೊಲೀಸರು ಮಂಗಳವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅದೇ ರಾತ್ರಿ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153 ಅಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಅನಾರೋಗ್ಯ ನಾಟಕವಾಡಿ ಚುನಾವಣೆ ಮುಂದೂಡಿದ ಅಧಿಕಾರಿ; ಗ್ರಾ.ಪಂ ಸದಸ್ಯರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

‘ನಾವು ಅಹಿಲೇ ಸುನ್ನತೆ ಜಮಾತ್‌ನವರಿದ್ದೇವೆ ಗೆಳೆಯರೆ. ನಮಗೆ ಬಾಲ್ಯದಿಂದ ಇದನ್ನೇ ಕಲಿಸಿಕೊಡಲಾಗಿದೆ. ಜೀವನದಲ್ಲಿ ಎಲ್ಲ ಕಷ್ಟವನ್ನು ಎದುರಿಸಿ. ಆದರೆ, ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದರೆ ಅವರ ದೇಹದಿಂದ ರುಂಡವನ್ನು ಬೇರ್ಪಡಿಸಿ’ ಎಂದು ವೈರಲ್ ವಿಡಿಯೋದಲ್ಲಿ ಹೇಳಲಾಗಿದೆ.

‘‌ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಗಂಡಸು ಎಂದುಕೊಳ್ಳುವವರೇ, ಗಂಡಸೇ ಆಗಿದ್ದರೆ 15 ನಿಮಿಷಕ್ಕಾಗಿ ಮೈದಾನಕ್ಕೆ ಬನ್ನಿ. ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುವವರೇ, ಮುಸ್ಲಿಮರನ್ನೇ ಟಾರ್ಗೆಟ್ ಮಾಡುವವರೇ ಎಷ್ಟು ಹಾರಾಡ್ತಿರಾ? ಹಾರಾಡಿ ಈ ಜಗತ್ತಿನಲ್ಲಿ. ಕುರಾನ್ ಬಹಳ ಸ್ಪಷ್ಟವಾಗಿ ಹೇಳುತ್ತದೆ. ಕಾಫಿರ್ (ಅನ್ಯ ಧರ್ಮಿಯರು) ಕೊನೆಗೆ ನಿಮ್ಮ ಸ್ಥಾನ ನರಕ’ ಎಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೊಡ್‌ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:56 pm, Wed, 9 August 23

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ