ಯಾದಗಿರಿ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದೆ. ಈ ಪರಿಣಾಮ ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣವಾಗಿದೆ.

ಯಾದಗಿರಿ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು
ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿರುವ ಮಂದಿ
Updated By: ಆಯೇಷಾ ಬಾನು

Updated on: Feb 15, 2023 | 1:31 PM

ಯಾದಗಿರಿ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಮೃತ ದುರ್ದೈವಿ. ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಉಲ್ಬಣ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದೆ. ಈ ಪರಿಣಾಮ ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣವಾಗಿದೆ. 30 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24, ಇಂದು 6 ಜನರಿಗೆ ವಾಂತಿ ಭೇದಿಯಾಗಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಸುಕಿನ ಜಾವ ಮಹಿಳೆ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಜನ ದಾಖಲಾಗಿದ್ದಾರೆ. ತೆಲಂಗಾಣದ ನಾರಾಯಣಪೇಟೆನಲ್ಲಿ 8, ಮೈಬೂಬನಗರದ ಖಾಸಗಿಯಲ್ಲಿ 4 ವರ್ಷದ ಬಾಲಕ ದಾಖಲಾಗಿದ್ದಾನೆ.

ಇದನ್ನೂ ಓದಿ: ಗೋಕಾಕ್: 6 ಬಾರಿ ಶಾಸಕ ರಮೇಶ್ ಜಾರಕಿಹೊಳಿಗೆ ಟಕ್ಕರ್​ ಕೊಡಲು ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸ್ಪರ್ಧಿಸುವಂತೆ ಪಂಚಮಸಾಲಿ ಮುಖಂಡರು ದುಂಬಾಲು

ಇನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 13 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಡಿಹೆಚ್​ಒ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:31 pm, Wed, 15 February 23