AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ

ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ದಾಳಿ ನಡೆಸಿ, 67 ಸಾವಿರ ಮೆಟ್ರಿಕ್ ಟನ್ ಮರಳು ಹಾಗೂ 20 ವಾಹನಗಳನ್ನು ಜಪ್ತಿ ಮಾಡಿದ್ದು, 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ
ಅಕ್ರಮ ಮರಳು ದಂಧೆ
ಅಮೀನ್​ ಸಾಬ್​
| Edited By: |

Updated on: Dec 18, 2025 | 9:08 PM

Share

ಯಾದಗಿರಿ, ಡಿಸೆಂಬರ್​​ 18: ಕೃಷ್ಣಾ ನದಿ ಯಾದಗಿರಿ (Yadgiri) ಜಿಲ್ಲೆಯ ಜನರ ಜೀವನಾಡಿ. ಈ ವರ್ಷ ಅತಿಯಾದ ಮಳೆಯಿಂದಾಗಿ ನದಿ ಮೈದುಂಬಿಕೊಂಡಿದೆ. ಇದರ ಜೊತೆಗೆ ಸಾಕಷ್ಟು ಮರಳು (sand) ಕೂಡ ಸಂಗ್ರಹವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ನದಿಯ ಒಡಲು ಬಗೆದು ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದಾರೆ. ಕೊನೆಗೂ ಅಧಿಕಾರಿಗಳು ಧೈರ್ಯ ಮಾಡಿ‌ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಅಷ್ಟೇ ಅಲ್ಲದೆ ಕೋಟ್ಯಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿ ವಾಹನಗಳನ್ನು ಸೀಜ್ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷ್ಣ ನದಿ ತೀರದಲ್ಲಿ ಮರಳು ದಂಧೆ ಜೋರಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ಮತ್ತು ಭೀಮಾ ನದಿ ತೀರದಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದ ಅಕ್ರಮ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ನದಿಗೆ ಜೆಸಿಬಿ ಹಾಗೂ ಹಿಟಾಚಿಗಳನ್ನ ಇಳಿಸಿ ಅಕ್ರಮವಾಗಿ ಮರಳನ್ನ ಲೂಟಿ ಮಾಡಲಾಗುತ್ತಿದೆ. ಅದರಲ್ಲೂ ಕೃಷ್ಣಾ ನದಿಯಲ್ಲಂತೂ ಅಕ್ರಮ ದಂಧೆಕೋರರು ಹಗಲು ರಾತ್ರಿಯನ್ನೆದೇ ಮರಳನ್ನ ಲೂಟಿ ಮಾಡುತ್ತಿದ್ದಾರೆ.

ಅಕ್ರಮವಾಗಿ ಮರಳು ಸಂಗ್ರಹ ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ

ಸುರಪುರ ತಾಲೂಕಿನ ಶೆಳ್ಳಗಿ, ಮುಷ್ಟಳ್ಳಿ, ಸೂಗೂರು ಹಾಗೂ ಹೆಮ್ಮಡಗಿ ಬಳಿಯಲ್ಲಿ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ‌. ಸರ್ಕಾರದಿಂದ ಯಾವುದೇ ಅಧಿಕೃತ ಟೆಂಡರ್​​ ಕರೆದು ಪಾಯಿಂಟ್ ಗುರುತು ಮಾಡದೆ ಇದ್ದರೂ ಸಹ ಮರಳು ದಂಧೆಕೋರರು ಅಕ್ರಮವಾಗಿ ಮರಳನ್ನ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳನ್ನು ರಾಜಾರೋಷವಾಗಿ ಲೂಟಿ ಮಾಡುವ ಕೆಲಸವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಜನರು ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮವಾಗಿರಲಿಲ್ಲ. ಆದರೆ ಇದೀಗ ಅಧಿಕಾರಿಗಳು ಮರಳು ದಂಧೆಕೋರರ ವಿರುದ್ಧ ಸಮರ ಸಾರಿದ್ದಾರೆ. ಅಕ್ರಮವಾಗಿ ಮರಳು ಸಂಗ್ರಹ ಮಾಡಿದ್ದ ಸ್ಥಳಗಳ ಮೇಲೆ ದಾಳಿ ಮಾಡಿ ಕೋಟ್ಯಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಕುಡಿಯೋಕಷ್ಟೇ ಅಲ್ಲ, ಸ್ನಾನಕ್ಕೂ ಯೋಗ್ಯವಲ್ಲ ಭೀಮಾ ನದಿ ನೀರು!

ಸುರಪುರ ತಾಲೂಕಿನ ಶೆಳ್ಳಗಿ, ಮುಷ್ಟಳ್ಳಿ, ಸೂಗೂರು ಹಾಗೂ ಹೆಮ್ಮಡಗಿ ಬಳಿ ಪೊಲೀಸರ ಸಹಕಾರದಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ವಾರ ದಾಳಿ ಮಾಡಿದ್ದ ಅಧಿಕಾರಿಗಳು ಅಕ್ರಮ ಮರಳು ಸಂಗ್ರಹ ಕಂಡು ಶಾಕ್​ ಆಗಿದ್ದಾರೆ. ಏಕೆಂದರೆ ಲೆಕ್ಕಕ್ಕೆ ಸಿಗದಷ್ಟು ಮರಳನ್ನ ನದಿಯಿಂದ ಬಗೆದು ಸಂಗ್ರಹಿಸಿಡಲಾಗಿತ್ತು. ಸದ್ಯ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿ ಲೆಕ್ಕ ಮಾಡಿದಾಗ ಮೂರು ಕಡೆ ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮರಳು ಸಿಕ್ಕಿದೆ. ಸುಮಾರು 67 ಸಾವಿರ ಮೆಟ್ರಿಕ್ ಟನ್ ಮರಳು, ಬಳಕೆ ಮಾಡಿದ ಸುಮಾರು 20 ಹಿಟಾಚಿ ವಾಹನಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಹುಳ ಬಿದ್ದಿರೋ ಅಕ್ಕಿ ಬೇಳೆ; TV9 ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಸಲಿಯತ್ತು

ಸುರಪುರ ಪೊಲೀಸ್ ಠಾಣೆಯಲ್ಲಿ 16 ಜನರ ವಿರುದ್ಧ ಮೂರು ಪ್ರತ್ಯೇಕ ಕೇಸ್​​ ದಾಖಲು ಮಾಡಿದ್ದಾರೆ. ಇನ್ನು ಅಧಿಕಾರಿಗಳಿಗೆ ಸಾಕಷ್ಟು ಕಡೆಗಳಿಂದ ಕರೆಗಳು ಬರುತ್ತಿದ್ದು, ವಾಹನಗಳನ್ನ ಬಿಡುಗಡೆ ಮಾಡುವಂತೆ ಒತ್ತಡ ಹೆಚ್ಚಿದೆ. ಆದರೆ ಅಧಿಕಾರಿಗಳು ಮಾತ್ರ ಯಾವುದಕ್ಕೆ ತಲೆ ಕೆಡಿಸಿಕೊಳ್ಳದೆ ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷ್ಣ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್​ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?