AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

Yadgir News: ಯಾದಗಿರಿ ಜಿಲ್ಲೆಯಲ್ಲಿ ಗರ್ಭಧಾರಣೆಗಳ ದಾಖಲೆ ಮತ್ತು ಅವುಗಳ ಮುಂದಿನ ಹಂತದ ಮೇಲ್ವಿಚಾರಣೆಯಲ್ಲಿ ಗಂಭೀರ ಲೋಪಗಳು ಕಂಡುಬಂದಿರುವ ಬಗ್ಗೆ ರಾಜ್ಯಮಟ್ಟದ ಬಹುಶಿಸ್ತೀಯ ತಜ್ಞರ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಕಳೆದ ಐದು ವರ್ಷಗಳ ಗರ್ಭಧಾರಣೆ ಪ್ರಕರಣಗಳಲ್ಲಿ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಮುಂದಿನ ಮಾಹಿತಿ ಲಭ್ಯವಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
ಯಾದಗಿರಿ ಜಿಲ್ಲಾಸ್ಪತ್ರೆ (ಸಾಂದರ್ಭಿಕ ಚಿತ್ರ)Image Credit source: tv9
ಅಮೀನ್​ ಸಾಬ್​
| Edited By: |

Updated on: Jul 14, 2026 | 7:49 AM

Share

ಮುಖ್ಯಾಂಶಗಳು

  • ಗರ್ಭಧಾರಣೆಯ 16 ಸಾವಿರ ಪ್ರಕರಣಗಳ ಮುಂದಿನ ಮಾಹಿತಿ ಇಲ್ಲ
  • ತಜ್ಞರ ವರದಿಯಲ್ಲಿ ಆತಂಕಕಾರಿ ಅಂಶಗಳು ಬಯಲು
  • ಆರೋಪಗಳನ್ನು ತಳ್ಳಿಹಾಕಿರುವ ಡಿಎಚ್‌ಒ

ಯಾದಗಿರಿ, ಜುಲೈ 14: ಯಾದಗಿರಿ (Yadgir) ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 53,595 ಮಹಿಳೆಯರು ಗರ್ಭಧಾರಣೆ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ 35,424 ಮಹಿಳೆಯರಿಗೆ ಹೆರಿಗೆ ಆಗಿದ್ದು, 2,055 ಪ್ರಕರಣಗಳಲ್ಲಿ ಗರ್ಭಪಾತ ದಾಖಲಾಗಿದೆ. ಆದರೆ ಉಳಿದ 16,116 ಗರ್ಭಧಾರಣೆ ಪ್ರಕರಣಗಳ ಅಂತಿಮ ಫಲಿತಾಂಶ ಅಥವಾ ಮುಂದಿನ ಮಾಹಿತಿ ದಾಖಲೆಗಳಲ್ಲಿ ಲಭ್ಯವಾಗಿಲ್ಲ ಎಂಬ ಆಘಾತಕಾರಿ ವಿಚಾರ ಬಯಲಾಗಿದೆ. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಗರ್ಭಧಾರಣೆ ಮೇಲ್ವಿಚಾರಣೆ ಕುರಿತಂತೆ ಕೇಳಿಬಂದಿದ್ದ ಆರೋಪಗಳ ಹಿನ್ನೆಲೆಯಲ್ಲಿ ಅಂದಿನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯಮಟ್ಟದ ಬಹುಶಿಸ್ತೀಯ ತಜ್ಞರ ಸಮಿತಿಯನ್ನು ರಚಿಸಿದ್ದರು. ಸಮಿತಿ ಕಳೆದ ಏಪ್ರಿಲ್ 6ರಿಂದ 10ರವರೆಗೆ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿ, 74 ಪುಟಗಳ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಅನೇಕ ಆಘಾತಕಾರಿ ಅಂಶಗಳು ಬಯಲಾಗಿವೆ.

ವರದಿಯ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 53,595 ಮಹಿಳೆಯರು ಗರ್ಭಧಾರಣೆ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ 35,424 ಮಹಿಳೆಯರಿಗೆ ಹೆರಿಗೆ ಆಗಿದ್ದು, 2,055 ಪ್ರಕರಣಗಳಲ್ಲಿ ಗರ್ಭಪಾತ ದಾಖಲಾಗಿದೆ. ಆದರೆ ಉಳಿದ 16,116 ಗರ್ಭಧಾರಣೆ ಪ್ರಕರಣಗಳ ಅಂತಿಮ ಫಲಿತಾಂಶ ಅಥವಾ ಮುಂದಿನ ಮಾಹಿತಿ ದಾಖಲೆಗಳಲ್ಲಿ ಲಭ್ಯವಾಗಿಲ್ಲ. ಈ ಅಂಶವೇ ಆರೋಗ್ಯ ಇಲಾಖೆಯ ಮೇಲ್ವಿಚಾರಣಾ ವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವ ಸಾಧ್ಯತೆ

ವರದಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವ ಸಾಧ್ಯತೆ, ಬಾಲಗರ್ಭಿಣಿಯರಲ್ಲಿ ಗರ್ಭಪಾತ, ಶಿಶು ಮರಣ ಪ್ರಮಾಣ ಹೆಚ್ಚಿರುವುದು ಹಾಗೂ ಗರ್ಭಧಾರಣೆಗಳ ಸಮರ್ಪಕ ಅನುಸರಣೆ (Follow-up) ಕೊರತೆಯ ಬಗ್ಗೆಯೂ ಉಲ್ಲೇಖಿಸಲಾಗಿದೆ. ಗರ್ಭಧಾರಣೆಯ 12 ವಾರಗಳ ಬಳಿಕ ಕೆಲವು ಕಡೆ ಅಕ್ರಮವಾಗಿ ಭ್ರೂಣದ ಲಿಂಗ ಪತ್ತೆ ಪರೀಕ್ಷೆ ನಡೆಸಲಾಗುತ್ತಿರುವ ಸಾಧ್ಯತೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ. ಅಲ್ಲದೆ, ಗರ್ಭಧಾರಣೆ ವೇಳೆ ನೀಡುವ ನೋಂದಣಿ ದಾಖಲೆಗಳನ್ನು ನಾಶಪಡಿಸಲಾಗುತ್ತಿದೆ ಹಾಗೂ ಗರ್ಭಪಾತ ಮಾತ್ರೆಗಳ ದುರ್ಬಳಕೆ ನಡೆಯುತ್ತಿರುವ ಆರೋಪಗಳನ್ನೂ ವರದಿ ಉಲ್ಲೇಖಿಸಿದೆ.

ಬಾಲ್ಯ ವಿವಾಹ ಹೆಚ್ಚಳ

ಇನ್ನೊಂದು ಆತಂಕಕಾರಿ ಅಂಶವೆಂದರೆ, ಜಿಲ್ಲೆಯಲ್ಲಿ 18 ವರ್ಷ ತುಂಬುವ ಮೊದಲೇ ಶೇ 33.2ರಷ್ಟು ಮಹಿಳೆಯರ ವಿವಾಹ ನಡೆಯುತ್ತಿರುವುದು. ಇದರಿಂದ ಬಾಲ್ಯ ಗರ್ಭಧಾರಣೆಗಳ ಪ್ರಮಾಣ ಹೆಚ್ಚುತ್ತಿರುವ ಸಾಧ್ಯತೆಯನ್ನೂ ವರದಿ ಪ್ರಸ್ತಾಪಿಸಿದೆ. ಅವಿವಾಹಿತೆಯರ ಗರ್ಭಪಾತ ಪ್ರಕರಣಗಳಲ್ಲಿ ಕುಟುಂಬದವರು ಮಾಹಿತಿ ನೀಡದಿರುವುದು ತನಿಖೆಗೆ ಅಡ್ಡಿಯಾಗುತ್ತಿದೆ ಎಂದು ವರದಿ ಹೇಳಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಹೇಳುವುದೇನು?

ಆದರೆ, ಈ ಆರೋಪಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಬಿರಾದಾರ್ ತಳ್ಳಿಹಾಕಿದ್ದಾರೆ. ವೈದ್ಯಕೀಯ ಕಾರಣಗಳಿಂದಲೇ ಗರ್ಭಪಾತಗಳು ನಡೆದಿವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಗರ್ಭಪಾತದ ಪ್ರಮಾಣ ಶೇ 4.6 ಇದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಅದು ಕೇವಲ ಶೇ 2.7 ಮಾತ್ರ ಇದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ

ಈ ನಡುವೆ ತಜ್ಞರ ಸಮಿತಿಯ ವರದಿ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸ್ಪಷ್ಟೀಕರಣದ ನಡುವೆ ವ್ಯತ್ಯಾಸ ಕಂಡುಬಂದಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ