AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ದುರ್ಮರಣ; 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರ

ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಎಂಟು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ದುರ್ಮರಣ; 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರ
ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿImage Credit source: Tv9 Kannada
ಅಮೀನ್​ ಸಾಬ್​
| Edited By: |

Updated on:Aug 23, 2026 | 12:44 PM

Share

ಮುಖ್ಯಾಂಶಗಳು

  • ಯಾದಗಿರಿ ಜಿಲ್ಲೆ ಶಹಾಪುರದ ಮಡ್ನಾಳ ಬಳಿ ಭೀಕರ ಅಪಘಾತ
  • ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ
  • ಮೂವರು ದುರ್ಮರಣ; 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರ

ಯಾದಗಿರಿ, ಆಗಸ್ಟ್​​ 23: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ. ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿಯಾಗಿದೆ ಎನ್ನಲಾಗಿದ್ದು, 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಎಸ್​ಜಿ ರಸ್ತೆ ಬಳಿ ಶಾರ್ಟ್​ ಸರ್ಕ್ಯೂಟ್‌ನಿಂದ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಕಾರು ವಿರೂಪಾಕ್ಷಿ ದೋನೆವಾಡಿ ಎಂಬುವವರಿಗೆ ಸೇರಿದ್ದು ಎಂಬ ಮಾಹಿತಿ ಲಭಿಸಿದೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಶೈಕ್ಷಣಿಕ ವರ್ಷ ಆರಂಭವಾಗಿ 2.5 ತಿಂಗಳು ಕಳೆದರೂ ಸಿಗದ ಶೂ-ಸಾಕ್ಸ್: ಬರಿಗಾಲಲ್ಲೇ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು

ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಸಾವು

ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ರೈಲು ನಿಲ್ದಾಣದಲ್ಲಿ ನಡೆದಿದೆ. ಕೆ.ಮುದ್ದನಹಳ್ಳಿಯ 47 ವರ್ಷದ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಅರಸೀಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:38 pm, Sun, 23 August 26

Follow Us