AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು: 9 ತಿಂಗಳ ಬಳಿಕ DDPI ಆಕ್ಷನ್

ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ 9 ತಿಂಗಳ ನಂತರ ಅಮಾನತುಗೊಳಿಸಲಾಗಿದೆ. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ದೂರಿನ ಆಧಾರದ ಮೇಲೆ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರು. ಇದರ ಅನ್ವಯ ಯಾದಗಿರಿ ಡಿಡಿಪಿಐ ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು: 9 ತಿಂಗಳ ಬಳಿಕ DDPI ಆಕ್ಷನ್
ಸಾಂದರ್ಭಿಕ ಚಿತ್ರ
ಅಮೀನ್​ ಸಾಬ್​
| Edited By: |

Updated on: Aug 27, 2026 | 9:13 AM

Share

ಯಾದಗಿರಿ, ಆ.27: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ಬಳಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ (DDPI) ಚನ್ನಬಸಪ್ಪ ಮುದೋಳ್ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

ಇನ್ನು ಅಮಾನತು ಆಗಿರುವ ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ ಎಂದು ಹೇಳಲಾಗಿದೆ.

ಆರ್‌ಎಸ್‌ಎಸ್ ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಈ ಇಬ್ಬರು ಶಿಕ್ಷಕರು ಭಾಗವಹಿಸಿದ್ದರು. ಸರ್ಕಾರಿ ಸೇವೆಯಲ್ಲಿದ್ದುಕೊಂಡು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ‘ಅಂಬೇಡ್ಕರ್ ಸ್ವಾಭಿಮಾನಿ ಸೇನೆ’ ಮುಖಂಡರು ನಿರಂತರವಾಗಿ ದೂರು ನೀಡಿದ್ದರು.

ಇದನ್ನೂ ಓದಿ: ಹನೂರು ಎನ್ ಕೌಂಟರ್ ಬೆನ್ನಲ್ಲೇ ಬಯಲಾಯ್ತು ಅಂತರರಾಷ್ಟ್ರೀಯ ಜಾಲ: ಚಾಮರಾಜನಗರದಿಂದ ಚೀನಾ, ಮಲೇಷಿಯಾಗೆ ಚಿಪ್ಪುಹಂದಿ ಸ್ಮಗ್ಲಿಂಗ್

ಈ ಕುರಿತು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಆಗಿನ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರು ಸಲ್ಲಿಸಿದ್ದರು. ದೂರಿನನ್ವಯ ಪ್ರಿಯಾಂಕ್ ಖರ್ಗೆ ಅವರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಇಲಾಖೆಯು, ಇಬ್ಬರೂ ಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿ ಈಗ ಅಧಿಕೃತ ಆದೇಶ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್