Yadgir: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು
ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಯಾದಗಿರಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತರು. ಮೃತರನ್ನು ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಘಟನೆ ಜರುಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಪಡ್ಡೆ ಹುಡುಗರಿಂದ ಅಪಾಯಕಾರಿ ಬೈಕ್ ವೀಲಿಂಗ್, ವಿಡಿಯೋ ವೈರಲ್
ಮೈಸೂರು: ಎಷ್ಟೇ ಕಠಿಣ ಕ್ರಮ ಕೈಗೊಂಡರು ಪುಂಡರ ವೀಲಿಂಗ್ ಹಾವಳಿ ಮಾತ್ರ ತಡೆಯಲಾಗುತ್ತಿಲ್ಲ. ರಾಜ್ಯದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಮೀತಿಮೀರಿದೆ. ಇವರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಏಪ್ರಿಲ್ 22 ರಂದು ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಐದಾರು ಬೈಕ್ನಲ್ಲಿ ಯುವಕರು ಬಂದು ಡೆಡ್ಲಿ ವಿಲೀಂಗ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.
ಇದನ್ನೂ ಓದಿ: Raichur: ಮಾನ್ವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ ವೇಳೆ ಮೊಬೈಲ್ ಕಳ್ಳನಿಗೆ ಬಿತ್ತು ಗೂಸಾ
ಈ ವೇಳೆ ಬೇರೆ ವಾಹನ ಸವಾರರಿಗೆ ಕಿರಿಕಿರಿ ನೀಡಿ ಜೊತೆಗೆ ಬೇರೆ ಸವಾರರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಈ ಪುಂಡರ ಹುಚ್ಚಾಟವನ್ನ ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಲೀಂಗ್ ಹುಚ್ಚಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸರಣಿ ಅಪಘಾತ; ಮೂವರು ಸ್ಪಾಟ್ ಡೆತ್
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅಲ್ಲೊಂದು ಇಲ್ಲೊಂದು ದರ್ಘಟನೆಗಳು ಸಂಭವಿಸುತ್ತಲೇ ಇವೆ. ಇದೀಗ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರು. ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿತ್ತು. ಈ ವೇಳೆ ಮತ್ತೊಂದು ಕಾರು ಬಂದು ಅವರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿತ್ತು.
ಇದನ್ನೂ ಓದಿ: ಬೆಂಗಳೂರು: ವೀಲಿಂಗ್ ಮಾಡಲು ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳ ಕಳ್ಳತನ: ಡಿಯೋ ಬೈಕ್ ಟಾರ್ಗೆಟ್
ಒಂದೇ ಬೈಕ್ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದರು. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಗೆ ಬಿದ್ದ ಮೂವರು ಅಲ್ಲೇ ಕೊನೆಯುಸಿರೆಳೆದಿದ್ದರು. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ
ಬೆಂಗಳೂರು ಯಲಹಂಕ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗೆ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿತ್ತು. ಬ್ರೇಕ್ ಫೇಲ್ ಆದ ಕಾರಣ ಚಾಲಕ ಕೆಲವು ವಾಹನಗಳಿಗೆ ಗುದ್ದಿ ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಲಾರಿ ನಿಲ್ಲಿಸಿದ್ದಾನೆ. ಇನ್ನು ಲಾರಿ ಗುದ್ದಿದ ರಭಸಕ್ಕೆ ಮರ ಧರೆಗುರುಳಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:58 pm, Thu, 4 May 23