ಭುಗಿಲೆದ್ದ ಟಿಪ್ಪು ಸರ್ಕಲ್ ವಿವಾದ: ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಸಹಾಯಕ ಆಯುಕ್ತರಿಂದ ಆದೇಶ

ಯಾದಗಿರಿ ನಗರದಲ್ಲಿರುವ ಟಿಪ್ಪು ಸುಲ್ತಾನ್‌ ಸರ್ಕಲ್ ವಿವಾದ ಬುಗಿಲೆದ್ದಿದ್ದು, ವೃತ್ತ ತೆರವುಗೊಳಿಸುವಂತೆ ಆಗ್ರಹಿಸಿ ಶಿವಾಜಿ ಸೇನೆಯಿಂದ ಫೆಬ್ರವರಿ 27ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಇದಕ್ಕೆ ಟಿಪ್ಪು ಸಂಘಟನೆಯಿಂದ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಭುಗಿಲೆದ್ದ ಟಿಪ್ಪು ಸರ್ಕಲ್ ವಿವಾದ: ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಸಹಾಯಕ ಆಯುಕ್ತರಿಂದ ಆದೇಶ
ಯಾದಗಿರಿ ನಗರದ ಹತ್ತಿಕುಣಿ ಕ್ರಾಸ್ ಬಳಿಯಿರುವ ಟಿಪ್ಪು ಸರ್ಕಲ್
Follow us
Rakesh Nayak Manchi
|

Updated on:Feb 26, 2023 | 4:24 PM

ಯಾದಗಿರಿ: ನಗರದ ಹತ್ತಿಕುಣಿ ಕ್ರಾಸ್ ಬಳಿಯಿರುವ ಟಿಪ್ಪು ಸರ್ಕಲ್ ವಿವಾದ (Yadagiri Tipu Circle Controversy) ತೀವ್ರತೆ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಯಾದಗಿರಿ ಸಹಾಯಕ ಆಯುಕ್ತರು, ವೃತ್ತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ (Imposition of prohibitory) ಆದೇಶಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11ರವರೆಗೆ ಗಾಂಧಿ ಚೌಕ್​ನಿಂದ ನಗರಸಭೆ ಕಚೇರಿ, ಹತ್ತಿಕುಣಿ ಕ್ರಾಸ್​ನಿಂದ ಗಂಗಾನಗರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಸಹಾಯಕ ಆಯುಕ್ತ ಶಾ ಆಲಂ ಹುಸೇನ್ ಅವರು ಆದೇಶ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದ್ದು, ಸ್ಥಳದಲ್ಲಿ ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಟಿಪ್ಪು ಸರ್ಕಲ್ ಅನಧಿಕೃತವಾಗಿದ್ದು, ಕೂಡಲೇ ತೆರವು ಮಾಡಬೇಕು, ಈ ಬಗ್ಗೆ ನಾಳೆ (ಫೆಬ್ರವರಿ 27) ಪ್ರತಿಭಟನೆ ನಡೆಸಲಾಗುವುದು ಎಂದು ಶಿವಾಜಿ ಸೇನೆ ಎಚ್ಚರಿಕೆ ನೀಡಿತ್ತು. ನಾಳೆ ಟಿಪ್ಪು ಸರ್ಕಲ್ ತೆರವು ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೆ ಪ್ರತಿಸವಾಲು ಹಾಕಿದ್ದ ಟಿಪ್ಪು ಸಂಘಟನೆ, ಯಾವುದೇ ಕಾರಣಕ್ಕೂ ಸರ್ಕಲ್ ತೆರವು ಮಾಡಲು ಬಿಡುವುದಿಲ್ಲ. ಯಾರು ಬರುತ್ತಾರೋ ಬರಲಿ ಎಂದು ಹೇಳಿತ್ತು. ಈ ಬೆಳವಣಿಗೆ ಹಿನ್ನಲೆ ನಿನ್ನೆ ಯಾದಗಿರಿ ಪೊಲೀಸರು ಶಿವಾಜಿ ಸೇನೆ ಹಾಗೂ ಟಿಪ್ಪು ಸಂಘಟನೆಯ ಮುಖಂಡರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಟಿಪ್ಪು ಸರ್ಕಲ್ ವಿಚಾರ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತದೆ, ಶಾಂತಿ ಕದಡಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಅವಮಾನಿಸಲೆಂದೇ ಕೊಡಗಿನ ಜನ ನಾಯಿಗೆ ಟಿಪ್ಪು ಹೆಸರಿಡುತ್ತಾರೆ, ಅಷ್ಟು ಕ್ರೋಧ, ಸಿಟ್ಟು, ಹತಾಶೆ ಜನರಿಗೆ ಇದೆ: ಅಡ್ಡಂಡ ಕಾರ್ಯಪ್ಪ

ಹತ್ತಿಕುಣಿ ಕ್ರಾಸ್ ಬಳಿ ಇರುವ ಟಿಪ್ಪು ಸುಲ್ತಾನ್‌ ಸರ್ಕಲ್ ಅನಧಿಕೃತವಾಗಿದೆ. ಇದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇದೆ 27 ರಂದು ಶಿವಾಜಿ ಸೇನೆಯಿಂದ ಟಿಪ್ಪು ಸರ್ಕಲ್​ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ತೆರವು ಮಾಡದಿದ್ದರೆ ನಾವೇ ತೆರವು ಮಾಡುತ್ತೇವೆ ಎಂದು ಶಿವಾಜಿ ಸೇನೆ ಅಧ್ಯಕ್ಷ ಪರಶುರಾಮ್ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಸವಾಲು ಹಾಕಿದ್ದ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಉತ್ತರ ಕರ್ನಾಟಕ ಅಧ್ಯಕ್ಷ ಅಬ್ದುಲ್ ಕರೀಂ, ಶಿವಾಜಿ ಸೇನೆಯ ಪ್ರತಿಭಟನೆಗೆ ಅವಕಾಶ ಕೊಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗ್ರಹಿಸಿದ್ದರು. ಅಲ್ಲದೆ, ಟಿಪ್ಪು ಸುಲ್ತಾನ್ ಸರ್ಕಲ್ ಅಧಿಕೃತವಾಗಿದೆ. 2010 ರಲ್ಲೇ‌ ನಗರಸಭೆ ಅನುಮತಿ ನೀಡಿದೆ. ಆದರೆ ಈಗ ಸುಖಾಸುಮ್ಮನೆ ವಿವಾದ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಪ್ರಕರಣ ದಾಖಲಿಸಿ ಒಳಗೆ ಹಾಕಬೇಕೆಂದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Sun, 26 February 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ