AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ರೈಲ್ವೆ ಪೊಲೀಸರು ಸೇರಿ 6 ಜನರ ವಿರುದ್ಧ ಕೇಸ್​​

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ರೈಲ್ವೆ ಪೊಲೀಸರು ಸೇರಿ 6 ಜನರ ವಿರುದ್ಧ ಕೇಸ್​​

ಅಮೀನ್​ ಸಾಬ್​
| Edited By: |

Updated on: Sep 18, 2026 | 9:13 PM

Share

ಯಾದಗಿರಿಯ ರೈಲ್ವೆ ಸ್ಟೇಷನ್ ಏರಿಯಾದಲ್ಲಿ 22 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ರೈಲ್ವೆ ಪೊಲೀಸರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಹೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಯಾದಗಿರಿ, ಸೆಪ್ಟೆಂಬರ್​​ 18: ರೈಲ್ವೆ ಪೊಲೀಸರಿಂದಲೇ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಯಾದಗಿರಿ ರೈಲ್ವೆ ಸ್ಟೇಷನ್ ಏರಿಯಾದಲ್ಲಿ  ದುಷ್ಕೃತ್ಯ ನಡೆದಿದೆ. ಊರಿಗೆ ತೆರಳಲು ವಿಶ್ರಾಂತಿ ಗೃಹದಲ್ಲಿದ್ದ ಮಹಿಳೆನ್ನ ಮಲ್ಲಿಕಾರ್ಜುನ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದು, ಬಳಿಕ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಇತರರು ಜೀವಬೆದರಿಕೆ ಹಾಕಿ ವಿವಿಧ ಲಾಡ್ಜ್‌ಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಸದ್ಯ ಇಬ್ಬರು ರೈಲ್ವೆ ಪೊಲೀಸರು ಸೇರಿ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಮಲ್ಲಿಕಾರ್ಜುನ ಹಾಗೂ ಮಹೇಶ್​ರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us