AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ಭೀಮಾ ನದಿಗೆ ಹಾರಿ 42 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ಕುಟುಂಬ ತಮ್ಮದೆ ಸಮುದಾಯದಿಂದ ಬಹಿಷ್ಕಾರಗೊಂಡಿದ್ದಾರೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ
ಮೃತ ಮಹಿಳೆ, ಮಾಂಗಲ್ಯ ಸರImage Credit source: tv9 kannada
ಅಮೀನ್​ ಸಾಬ್​
| Edited By: |

Updated on: Mar 15, 2026 | 6:05 PM

Share

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಡೆದದ್ದೇನು?

ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧ ಎಂದು ಆರೋಪಿಸಿ ತಮ್ಮದೇ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಮೀನುಗಾರಿಕೆ ಜೊತೆಗೆ ಮಾರಾಟ ಮಾಡಲು ಮುಖಂಡರು ಅವಕಾಶ ನೀಡಿಲ್ಲ.

ಇದನ್ನೂ ಓದಿ: ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಬ್ಯಾರೇಜ್ ಮೇಲೆ ಮಾಂಗಲ್ಯ ಸರ ತೆಗೆದಿಟ್ಟಿದ್ದಾರೆ. ಇಂದು ಮಧ್ಯಾಹ್ನ ಅಗ್ನಿ ಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಮದುವೆಗೆ ವಿರೋಧ: ಭದ್ರನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು 

ತುಂಗ ಭದ್ರನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಳಿ ಇರುವ ತುಂಗಭದ್ರ ಸೇತುವೆ ಬಳಿ ಇತ್ತೀಚೆಗೆ ನಡೆದಿದೆ. ಸ್ಥಳೀಯರಿಂದ ಮಾಹಿತಿ ಬೆನ್ನಲ್ಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಪ್ರೇಮಿಗಳನ್ನ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳು. ಅಪ್ರಾಪ್ತ ಬಾಲಕಿ ಹಾಗೂ 19 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಪ್ರೇಮಿಗಳು ಸೇತುವೆಯಿಂದ ನದಿಗೆ ಹಾರಿದ್ದಾರೆ. ನದಿಯಲ್ಲಿ ನೀರು ಕಡಿಮೆ ಇದ್ದ ಹಿನ್ನೆಲೆ ನಡುಗಡ್ದೆಯಲ್ಲಿ ಆಸರೆ ಪಡೆದಿದ್ದರು. ಯುವಕ ಅನ್ಯಧರ್ಮೀಯ ಹಿನ್ನೆಲೆ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಹೊನ್ನಾಳಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us