ಯಾದಗಿರಿ: ಮೂರು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೊಳ್ಳೂರು ಸೇತುವೆ ಮುಳುಗಡೆ

| Updated By: shivaprasad.hs

Updated on: Jul 24, 2021 | 4:22 PM

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ಯಾದಗಿರಿಯಿಂದ ರಾಯಚೂರು, ಕಲಬುರುಗಿಯ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಈ ಕುರಿತ ಟಿವಿ9 ವರದಿ ಇಲ್ಲಿದೆ.

ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಕೃಷ್ಣಾ ನದಿಯಲ್ಲಿ ನೀರು ಹೆಚ್ಚಳವಾಗಿದೆ. ಆದ್ದರಿಂದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರಿನ ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂರು ಜಿಲ್ಲೆಗಳ ನಡುವೆ ಸಂಪರ್ಕ ಕಲ್ಪಿಸುತ್ತಿತ್ತು. ರಾಯಚೂರಿನಿಂದ ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ತೆರಳಲು ಮಾರ್ಗವಾಗಿದ್ದ ಈ ಸೇತುವೆಯ ಮುಳುಗಡೆಯಿಂದಾಗಿ ಸಂಚಾರ ಸ್ಥಗಿತಗೊಂಡಿದೆ. ನಿತ್ಯ ಸಾವಿರಾರು ವಾಹನಗಳ ಸಂಚಾರ ಆಗುತ್ತಿದ್ದ ಈ ದಾರಿಯಲ್ಲಿ ನಿನ್ನೆ ರಾತ್ರಿಯಿಂದ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಸಂಪೂರ್ಣ ಬ್ರೇಕ್ ಹಾಕಿದೆ. ಸೇತುವೆ ಬಳಿ ಸಾರ್ವಜನಿಕರು ತೆರಳದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಡ್ಯಾಂ ನಿಂದ‌ ಕೃಷ್ಣಾ ನದಿಗೆ ೩.೫ ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆ ಮಾಡಲಾಗುತ್ತಿರುವುದರಿಂದ ನೀರಿನ ಪ್ರಮಾಣ ಹೆಚ್ಚಾಗಿದೆ.

ಇದನ್ನೂ ಓದಿ:

ಯಾದಗಿರಿ: ಕಷ್ಟಕಾಲದಲ್ಲಿ ಒದಗದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಸಂತ್ರಸ್ತರ ತೀವ್ರ ಆಕ್ರೋಶ

MS Dhoni: ಧೋನಿ ಕೋಚ್ ಆಗಲಿದ್ದಾರೆ: ಮಾಜಿ ಕ್ರಿಕೆಟಿಗನ ಭವಿಷ್ಯ..!

Wild Boar menace: ಕಾಡು ಹಂದಿ ಬೇಟೆಗೆ ಹೈಕೋರ್ಟ್ ಅನುಮತಿ; ಆದರೆ ವನ್ಯಜೀವಿ ಪ್ರಿಯರು ಎತ್ತಿದ್ದಾರೆ ಆಕ್ಷೇಪ!

(Yadgiri districts Kollur bridge is waterlogged and the way to Rayachuru and Kalaburgi is broken from Kollur)