AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಈ ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!
ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ
ಅಮೀನ್​ ಸಾಬ್​
| Edited By: |

Updated on: May 09, 2026 | 8:10 AM

Share

ಯಾದಗಿರಿ, ಮೇ 09: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ (Bribe) ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಮುಖ್ಯಾಂಶಗಳು

  • ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್
  •  ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು ಹಣ ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ.
  •  ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದಲ್ಲಿ ದಾಳಿ

ನಡೆದಿದ್ದೇನು?

ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ

ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇನ್ಸ್‌ಪೆಕ್ಟರ್ ವೀರಣ್ಣ ಬಲೆಗೆ ಬೀಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?