AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಪಲ್ಟಿ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಗ್ರೇಟ್ ಎಸ್ಕೇಪ್

ಬಿಜೆಪಿ ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಸೇರಿದ ಕಾರು ಪಲ್ಟಿ ಹೊಡೆದಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ನಡೆದಿದೆ. ಭೈರತಿ ಬಸವರಾಜ್‌ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಪಲ್ಟಿ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಗ್ರೇಟ್ ಎಸ್ಕೇಪ್
ಭೈರತಿ ಬಸವರಾಜ್‌ಗೆ ಸೇರಿದ ಕಾರು ಪಲ್ಟಿ
ಅಮೀನ್​ ಸಾಬ್​
| Edited By: |

Updated on: Apr 29, 2024 | 9:55 PM

Share

ಯಾದಗಿರಿ, ಏಪ್ರಿಲ್​​ 29: ಬಿಜೆಪಿ ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಸೇರಿದ ಕಾರು ಪಲ್ಟಿ (Accident) ಹೊಡೆದಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ನಡೆದಿದೆ. ಸುರಪುರ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಬೇರೆಯವರ ಕಾರಿನಲ್ಲಿ ತೆರಳಿದ್ದರಿಂದ ಮಾಜಿ ಸಚಿವ ಭೈರತಿ ಬಸವರಾಜ್ (Byrati Basavaraj) ಅದೃಷ್ಟವಶಾತ್​ ಪಾರಾಗಿದ್ದಾರೆ. ಆದರೆ ಭೈರತಿ ಬಸವರಾಜ್‌ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸ್​ ಠಾಣೆಯ ಪಿಎಸ್​ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕ್ರೇನ್​ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿಸಲಾಗಿದೆ. ಹುಣಸಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪಂಚರ್ ಆಗಿದ್ದ ಟೈರ್ ಬದಲಾಯಿಸ್ತಿದ್ದಾಗ ಅಪಘಾತ: ಲಾರಿ ಚಾಲಕ ಸಾವು

ಆನೇಕಲ್‌: ಪಂಚರ್ ಆಗಿದ್ದ ಟೈರ್ ಬದಲಾಯಿಸುತ್ತಿದ್ದಾಗ ಬೈಕ್ ಡಿಕ್ಕಿ ಆಗಿ ಲಾರಿ ಚಾಲಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಸುಣವಾರ ಗೇಟ್ ಬಳಿ ನಡೆದಿದೆ. ಬೈಕ್ ಡಿಕ್ಕಿಯಿಂದ ಲಾರಿ ಚಾಲಕ ದೊಡ್ಡಹಾಗಡೆ ಗ್ರಾಮದ ರೋಹಿತ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಯ್ಯೋ ದುರ್ವಿಧಿಯೇ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ಲಾರಿಯ ಕೆಳಗೆ ಮಲಗಿ ಟೈರ್ ಬದಲಿಸಲು ಚಾಲಕ ಜಾಕ್ ಹಾಕುತ್ತಿದ್ದ. ಕತ್ತಲಿನಲ್ಲಿ ಕಾಣದೆ ಲಾರಿ ಚಾಲಕನಿಗೆ ಬೈಕ್‌ನಿಂದ ಸವಾರ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಜಾಕ್ ಸ್ಲಿಪ್‌ ಆಗಿ ಲಾರಿ ಕುಸಿದಿದ್ದರಿಂದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್‌ ಧರ್ಮಪತ್ನಿ ವಿಧಿವಶ

ವಿಜಯನಗರ: ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್‌ ಧರ್ಮಪತ್ನಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಜಿಲ್ಲೆಯ ಹೂವಿನಹಡಗಲಿಯ ನಿವಾಸದಲ್ಲಿ ನಿಧನ ರುದ್ರಾಂಭ(78) ಕೊನೆಯುಸಿರೆಳೆದಿದ್ದಾರೆ. ನಾಳೆ ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಹೂವಿನಹಡಗಲಿಯಲ್ಲಿ ಎಂಪಿಪಿ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ