ಯಾದಗಿರಿ, ಏಪ್ರಿಲ್ 29: ಬಿಜೆಪಿ ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಸೇರಿದ ಕಾರು ಪಲ್ಟಿ (Accident) ಹೊಡೆದಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ನಡೆದಿದೆ. ಸುರಪುರ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಬೇರೆಯವರ ಕಾರಿನಲ್ಲಿ ತೆರಳಿದ್ದರಿಂದ ಮಾಜಿ ಸಚಿವ ಭೈರತಿ ಬಸವರಾಜ್ (Byrati Basavaraj) ಅದೃಷ್ಟವಶಾತ್ ಪಾರಾಗಿದ್ದಾರೆ. ಆದರೆ ಭೈರತಿ ಬಸವರಾಜ್ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸ್ ಠಾಣೆಯ ಪಿಎಸ್ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿಸಲಾಗಿದೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆನೇಕಲ್: ಪಂಚರ್ ಆಗಿದ್ದ ಟೈರ್ ಬದಲಾಯಿಸುತ್ತಿದ್ದಾಗ ಬೈಕ್ ಡಿಕ್ಕಿ ಆಗಿ ಲಾರಿ ಚಾಲಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಸುಣವಾರ ಗೇಟ್ ಬಳಿ ನಡೆದಿದೆ. ಬೈಕ್ ಡಿಕ್ಕಿಯಿಂದ ಲಾರಿ ಚಾಲಕ ದೊಡ್ಡಹಾಗಡೆ ಗ್ರಾಮದ ರೋಹಿತ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಅಯ್ಯೋ ದುರ್ವಿಧಿಯೇ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು
ಲಾರಿಯ ಕೆಳಗೆ ಮಲಗಿ ಟೈರ್ ಬದಲಿಸಲು ಚಾಲಕ ಜಾಕ್ ಹಾಕುತ್ತಿದ್ದ. ಕತ್ತಲಿನಲ್ಲಿ ಕಾಣದೆ ಲಾರಿ ಚಾಲಕನಿಗೆ ಬೈಕ್‌ನಿಂದ ಸವಾರ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಜಾಕ್ ಸ್ಲಿಪ್ ಆಗಿ ಲಾರಿ ಕುಸಿದಿದ್ದರಿಂದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿಜಯನಗರ: ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಧರ್ಮಪತ್ನಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಜಿಲ್ಲೆಯ ಹೂವಿನಹಡಗಲಿಯ ನಿವಾಸದಲ್ಲಿ ನಿಧನ ರುದ್ರಾಂಭ(78) ಕೊನೆಯುಸಿರೆಳೆದಿದ್ದಾರೆ. ನಾಳೆ ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಹೂವಿನಹಡಗಲಿಯಲ್ಲಿ ಎಂಪಿಪಿ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.