ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಯಾದಗಿರಿಯಲ್ಲಿ ಸೈಬರ್​ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ, ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​ನ್ನು ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
Follow us
Kiran HV
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 03, 2024 | 7:14 PM

ಬೆಂಗಳೂರು, ಆ.03: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್​ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಆ.03) ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

17 ಗಂಟೆ ಬಳಿಕ ಪ್ರಕರಣ ದಾಖಲಿಸಿದ್ದ ಪೊಲೀಸರು

ಇನ್ನು ಸೈಬರ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್​​ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.

ಇದನ್ನೂ ಓದಿ:ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!

ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ ಮಾಜಿ ಶಾಸಕ ರಾಜುಗೌಡ

ಇನ್ನು ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದರು. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್​ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಯತ್ನಾಳ್​, JDS ಶಾಸಕ ಶರಣಗೌಡ ಕಂದಕೂರು ಕೂಡ ತನಿಖೆಗೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sat, 3 August 24