ಬೆಂಗಳೂರು, ಆ.03: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಆ.03) ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇನ್ನು ಸೈಬರ್ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.
ಇದನ್ನೂ ಓದಿ:ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!
ಇನ್ನು ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದರು. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಯತ್ನಾಳ್, JDS ಶಾಸಕ ಶರಣಗೌಡ ಕಂದಕೂರು ಕೂಡ ತನಿಖೆಗೆ ಆಗ್ರಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:04 pm, Sat, 3 August 24