ಜಾತಿ ನಿಂದನೆಗೆ ಹೆದರಿ ಮಗ ಆತ್ಮಹತ್ಯೆ: ಸುದ್ದಿ ತಿಳಿದು ಹೃದಯಾಘಾತದಿಂದ ತಂದೆ ಕೂಡ ಸಾವು

ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದಲ್ಲಿ ಜಾತಿ ನಿಂದನೆ​ಗೆ ಹೆದರಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಮೃತಪಟ್ಟಿರುವಂತಹ ಘಟನೆ ನಡೆದಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿನಲ್ಲಿ ದಾರಿ ವಿಚಾರಕ್ಕೆ ದಲಿತ ಕುಟುಂಬದ ಜತೆ ಜಗಳ ಆಗಿತ್ತು.

ಜಾತಿ ನಿಂದನೆಗೆ ಹೆದರಿ ಮಗ ಆತ್ಮಹತ್ಯೆ: ಸುದ್ದಿ ತಿಳಿದು ಹೃದಯಾಘಾತದಿಂದ ತಂದೆ ಕೂಡ ಸಾವು
ಮಗ ಮೆಹಬೂಬ್, ತಂದೆ ಸೈಯದ್ ಅಲಿ
Edited By:

Updated on: Jul 10, 2025 | 10:28 AM

ಯಾದಗಿರಿ, ಜುಲೈ 10: ಜಾತಿ ನಿಂದನೆ ಕೇಸ್​ಗೆ ಹೆದರಿ ಮಗ ಆತ್ಮಹತ್ಯೆ ಮಾಡಿಕೊಂಡರೆ, ಮಗನ ಸಾವಿನ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ (death) ಘಟನೆ ಯಾದಗಿರಿ (Yadgiri) ಜಿಲ್ಲೆಯ ವಡಗೇರ ಪಟ್ಟಣದಲ್ಲಿ ನಡೆದಿದೆ. ಮರಕ್ಕೆ ನೇಣುಬಿಗಿದುಕೊಂಡು ಮೆಹಬೂಬ್(22) ಆತ್ಮಹತ್ಯೆಗೆ ಶರಣಾಗಿದ್ದು, ಹೃದಯಾಘಾತದಿಂದ ತಂದೆ ಸೈಯದ್ ಅಲಿ(50) ಸಾವನ್ನಪ್ಪಿದ್ದಾರೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಡೆದದ್ದೇನು?

ಬೇರೆಯವರ ಜಮೀನಿನ ಮೂಲಕ ತನ್ನ ಜಮೀನಿಗೆ ನಡೆದುಕೊಂಡು ಹೋಗುವ ವಿಚಾರವಾಗಿ ಕಳೆದ ಒಂದು ವಾರದ ಹಿಂದೆ ವಡಗೇರ ಪಟ್ಟಣದ ದಲಿತ ಕುಟುಂಬದ ಜೊತೆ ಜಗಳ ಉಂಟಾಗಿತ್ತು. ಜಗಳದ ಬಳಿಕ ಹಿರಿಯರು ಕುಳಿತು ನ್ಯಾಯ ಪಂಚಾಯತಿ ಮಾಡಿ‌ ಬಗೆ ಹರಿಸಿದ್ದರು. ಆದರೆ ಬೇರೆ ಊರಿಂದ‌ ಬಂದ ದಲಿತ ಮುಖಂಡ ಓರ್ವ ಜಾತಿ‌ ನಿಂದನೆ ಕೇಸ್ ದಾಖಲು ಮಾಡಿ, ಜೈಲಿಗೆ ಕಳುಹಿಸುತ್ತೇನೆ ಅಂತ ಮೆಹಬೂಬ್​ಗೆ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಇದನ್ನೂ ಓದಿ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಾಪಿಂಗ್ ಹೋಗಿದ್ದಕ್ಕೆ ಕೆಂಡಾಮಂಡಲ: ಪತ್ನಿಯನ್ನು ತುಳಿದು ಕೊಂದ ಪತಿ..!
ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ. ವಂಚನೆ, ಮಹಿಳೆ ಅರೆಸ್ಟ್!
ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ಕೇಸ್ ದಾಖಲಾದರೆ ಮರ್ಯಾದೆ ಹೋಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ ಅಂತ ಮೆಹಬೂಬ್​ ಹೆದರಿದ್ದಾನೆ. ಇದೆ ಕಾರಣಕ್ಕೆ ಬುಧವಾರದಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಮಗನ ಆತ್ಮಹತ್ಯೆ ಸುದ್ದಿ ತಿಳಿದು ಶಾಕ್​ಗೆ ಒಳಗಾದ ತಂದೆಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಸೈಯದ್ ಸಲಿ ಕೂಡ ಕೊನೆಯುಸಿರೆಳೆದಿದ್ದಾರೆ.

ನಕಲಿ ಚಿನ್ನ ನೀಡಿ ವಂಚನೆ: ಇಬ್ಬರ ಬಂಧನ

ಚಿತ್ರದುರ್ಗದಲ್ಲಿ ನಕಲಿ ಚಿನ್ನ ನೀಡಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ಇಬ್ಬರನ್ನು ಬಂಧಿಸಲಾಗಿದೆ. ದಾವಣಗೆರೆಯ ರಮೇಶ್​​​ ಹಾಗೂ ವಿಜಯನಗರ ಮೂಲದ ರಾಮಕೃಷ್ಣ ಬಂಧಿತರು.

ಇದನ್ನೂ ಓದಿ: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ತಮಿಳುನಾಡು ಮೂಲದ ಕೆ.ಪಾಂಡಿ ಎಂಬುವರಿಗೆ 2 ಕೆಜಿ ಚಿನ್ನ ಕೊಡುವುದಾಗಿ 35 ಲಕ್ಷ ರೂ. ಪಡೆದು ವಂಚಿಸಿದ್ದರು. ಸದ್ಯ ಪೊಲೀಸರು ಬಂಧಿತರಿಂದ 22 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:19 am, Thu, 10 July 25