ಯಾದಗಿರಿಯಲ್ಲಿ ಜುಲೈ 12 ರಿಂದ ಮೂರು-ದಿನ ಭಾರೀ ಮಳೆಯಾಗುವ ಮುನ್ಸೂಚನೆ, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್​ ಘೋಷಿಸಿದ ಜಿಲ್ಲಾಧಿಕಾರಿ

ತಾಲೂಕು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳಲ್ಲೇ ಇರಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಹಾಗೆಯೇ, ಸಾರ್ವಜನಿಕರು ಸಹ ಎಚ್ಚರ ಮತ್ತು ಜಾಗರೂಕತೆಯಿಂದ ಇರಬೇಕೆಂದು ಸೂಚಿಸಿರುವ ಜಿಲ್ಲಾಧಿಕಾರಿಗಳು ನದಿ, ಕೆರೆ ಮತ್ತು ನೀರಿನಿಂದ ಆವೃತವಾಗಿರುವ ಯಾವುದೇ ಪ್ರದೇಶಕ್ಕೆ ಇಳಿಯಬಾರದೆಂದು ಸೂಚಿಸಿದ್ದಾರೆ.

ಯಾದಗಿರಿಯಲ್ಲಿ ಜುಲೈ 12 ರಿಂದ ಮೂರು-ದಿನ ಭಾರೀ ಮಳೆಯಾಗುವ ಮುನ್ಸೂಚನೆ, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್​ ಘೋಷಿಸಿದ ಜಿಲ್ಲಾಧಿಕಾರಿ
ಯಾದಗಿರಿ ಜಿಲ್ಲಾಧಿಕಾರಿ ಡಾ ರಾಗಪ್ರಿಯಾ ಅರ್
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 10, 2021 | 11:58 PM

ಯಾದಗಿರಿ: ಸುಡುಬಿಸಿಲಿನ ನಾಡು ಎಂದು ಕರೆಸಿಕೊಳ್ಳುವ ಯಾದಗಿರಿಗೆ ಈ ಸಲ ಮಳೆಯ ಕಂಟಕ ಎದುರಾಗಿದೆ. ಹವಾಮಾನ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ನೀಡಿರುವ ಮುನ್ಸೂಚನೆ ಪ್ರಕಾರ ಸೋಮವಾರ ಅಂದರೆ ಜುಲೈ 12 ರಿಂದ ಮೂರು ದಿನಗಳವರೆಗೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ. ಸದರಿ ಮುನ್ಸೂಚನೆಯ ಹಿನ್ನೆಲೆಯಲ್ಲೇ ಯಾದಗಿರಿ ಜಿಲ್ಲಾಧಿಕಾರಿ ಡಾ ರಾಗಪ್ರಿಯಾ ಆರ್ ಅವರು ಜುಲೈ 12ರಿಂದ 14 ರವರೆಗೆ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ತಾಲೂಕು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳಲ್ಲೇ ಇರಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಹಾಗೆಯೇ, ಸಾರ್ವಜನಿಕರು ಸಹ ಎಚ್ಚರ ಮತ್ತು ಜಾಗರೂಕತೆಯಿಂದ ಇರಬೇಕೆಂದು ಸೂಚಿಸಿರುವ ಜಿಲ್ಲಾಧಿಕಾರಿಗಳು ನದಿ, ಕೆರೆ ಮತ್ತು ನೀರಿನಿಂದ ಆವೃತವಾಗಿರುವ ಯಾವುದೇ ಪ್ರದೇಶಕ್ಕೆ ಇಳಿಯಬಾರದೆಂದು ಸೂಚಿಸಿದ್ದಾರೆ.

ಪರಿಸ್ಥಿತಿ ಹತೋಟಿ ಮೀರುವ ಸಂದರ್ಭ ಎದುರಾದರೆ ಸನ್ನದ್ಧರಾಗಿರುವಂತೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಸೂಚಿಸಲಾಗಿದೆ.

ಹವಾಮಾನ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೋಮವಾರದಿಂದ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದರೂ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭಾರೀ ಅಲ್ಲದಿದ್ದರೂ ಹಗುರವಾದ ಮಳೆ ಬೀಳುತ್ತಿದೆ. ಯಾದಗಿರಿಯ ಟಿವಿ9 ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅಲ್ಲೀಪುರ, ಮುದ್ನಾಳ, ಅಬ್ಬೆ ತುಮಕೂರು, ಠಾಣಗುಂದ, ಬೊಮ್ಮಚಟ್ನಳ್ಳಿ, ಮಲಕಪ್ಪನಹಳ್ಳಿ, ವಡ್ನಳ್ಳಿ, ಎಸ್ ಹೊಸಳ್ಳಿ, ಮೋಟ್ನಳ್ಳಿ, ಕೋಟಗೇರಾ, ಚಿಂತಕುಂಟ, ಹೆಡಗಿಮದ್ರ, ಹೊನಗೇರಾ, ಹತ್ತಿಕುಣಿ, ಸಮಣಪುರ, ಬಂದಳ್ಳಿ, ಯಡ್ಡಳ್ಳಿ, ಚಾಮನಳ್ಳಿ, ಬೆಳಗೇರಾ, ಖಾನಳ್ಳಿ, ಅರಿಕೇರಾ ಬಿ, ಬಸವಂತಪುರ, ಕ್ಯಾಸಪನಹಳ್ಳಿ, ಹೋರುಣಚ, ಅಚ್ಚೋಲ, ಗುಲಗುಂದಿ, ಕಂಚಗಾರ ಹಳ್ಳಿ, ಬಾಚವಾರ, ಕಟ್ಟಿಗೆ ಶಹಾಪುರ ಮೊದಲಾದ ಗ್ರಾಮಗಳಲ್ಲಿ ಸೋನೆ ಮಳೆ ಸುರಿಯುತ್ತಿದೆ.

ಈ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಕೆಲವು ಹಳ್ಳಿಗಳಲ್ಲಿ ನಿಂತು ಹೋಗಿದ್ದ ಬಿತ್ತನೆ ಕಾರ್ಯ ಮತ್ತೆ ಶುರುವಾಗಿದೆ. ಕೆರೆ-ಕುಂಟೆಗಳು ಭರ್ತಿಯಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ರೈತಾಪಿ ಜನ ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯೆಲ್ಲೆಡೆ ಮೂರು ದಿನಗಳ ಕಾಲ ಮಳೆ ಸುರಿದರೆ ಅವರು ಕಷ್ಟಕ್ಕೀಡಾಗಲಿದ್ದಾರೆ.

ಇದನ್ನೂ ಓದಿ: ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ