AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಅಂಗನವಾಡಿಯ ಕರ್ಮಕಾಂಡ ಬಯಲು: ಕಾರ್ಯಕರ್ತೆಯಿಂದ ಕಾಳಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ

ಕೊಪ್ಪಳ ಜಿಲ್ಲೆಯ ಅಂಗನವಾಡಿಯೊಂದರಲ್ಲಿ ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿದ ನಂತರ ವಾಪಸ್​ ಕಸಿದುಕೊಂಡಿದ್ದ ವಿಡಿಯೋ ಸಾಕಷ್ಟು ವೈರಲ್ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದೀಗ ಯಾದಗಿರಿಯಲ್ಲಿ ಅಂಗನವಾಡಿಯ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಕಾರ್ಯಕರ್ತೆಯಿಂದ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಸ್ಥಳೀಯರ ಮೊಬೈಲ್​ನಲ್ಲಿ ವಿಡಿಯೋ ಸೆರೆ ಆಗಿದೆ.

ಯಾದಗಿರಿಯಲ್ಲಿ ಅಂಗನವಾಡಿಯ ಕರ್ಮಕಾಂಡ ಬಯಲು: ಕಾರ್ಯಕರ್ತೆಯಿಂದ ಕಾಳಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ
ಯಾದಗಿರಿಯಲ್ಲಿ ಅಂಗನವಾಡಿಯ ಕರ್ಮಕಾಂಡ ಬಯಲು: ಕಾರ್ಯಕರ್ತೆಯಿಂದ ಕಾಳಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ
ಅಮೀನ್​ ಸಾಬ್​
| Edited By: |

Updated on: Aug 16, 2024 | 10:23 AM

Share

ಯಾದಗಿರಿ, ಆಗಸ್ಟ್​ 16: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ (Anganwadi) ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್​ ನಡೆದ ಬಗ್ಗೆ ಆರೋಪ ಕೇಳಿಬಂದಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿದ ನಂತರ ಮೊಟ್ಟೆಯನ್ನು ಕಸಿದುಕೊಂಡಿದ್ದ ವಿಡಿಯೋ ವೈರಲ್​ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೊಂದು ಅಂಗನವಾಡಿಯ ಕರ್ಮಕಾಂಡ ಬಯಲಾಗಿದೆ. ಮೂಟೆಗಟ್ಟಲೇ ಆಹಾರ ಪದಾರ್ಥ ಕಾಳಸಂತೆಯಲ್ಲಿ ಮಾರಾಟವಾಗಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ನಡೆದಿದೆ.

ಹಗರಟಗಿ ಗ್ರಾಮದ‌ ಅಂಗನವಾಡಿ ಕೇಂದ್ರ-2ರ ಅಕ್ರಮ ಬಯಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಉಮಾರಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಅಕ್ಕಿ, ಬೇಳೆ, ಶೇಂಗಾ, ಬೆಲ್ಲ, ಚಿಕ್ಕೆ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಸರ್ಕಾರದಿಂದ ಬರುವ ಆಹಾರ ಪದಾರ್ಥಗಳನ್ನು ಮೂಟೆಯಲ್ಲಿ ಉಮಾ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಸ್ಥಳೀಯರ ಮೊಬೈಲ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕಳ್ಳಾಟ ಬಯಲಾಗಿದೆ.

ಮೊಟ್ಟೆಗಿಲ್ಲ ಹಣ

ಧಾರವಾಡ: ಅವಳಿ ನಗರದ ಅಂಗನವಾಡಿ ಶಿಕ್ಷಕಿಯರಿಗೆ ಐದು ತಿಂಗಳಿನಿಂದ ಗೌರವ ಧನವೇ ಬಂದಿಲ್ಲ. ಅಂಗನವಾಡಿಯಿಂದ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆ ಮಾಡಲಾಗುವ ಮೊಟ್ಟೆಯನ್ನು ಅಂಗನವಾಡಿ ಶಿಕ್ಷಕಿಯರೇ ತಮ್ಮ ಕೈಯಿಂದ ದುಡ್ಡು ಹಾಕಿ ಪೂರೈಕೆ ಮಾಡಿದ್ದಾರೆ. ಕಳೆದ ಐದು ತಿಂಗಳಿನಿಂದ ತಮ್ಮ ಕೈಯಿಂದ ದುಡ್ಡು ಹಾಕಿ ತೆಗೆದುಕೊಂಡು ಬಂದ ಮೊಟ್ಟೆಯ ಬಿಲ್‌ ಕೂಡ ಆಗಿಲ್ಲ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 494 ಅಂಗನವಾಡಿ ಕೇಂದ್ರಗಳಿವೆ. ಅವುಗಳ ಬಾಡಿಗೆ ಕೂಡ ಕೊಡಲು ಸಾಧ್ಯವಾಗಿಲ್ಲ.‌ ಇಲಾಖೆಯ ನಿರ್ದೇಶಕರಿಗೆ ಕೇಳಿದರೆ, ಅವರು ಪ್ರತಿ‌ ತಿಂಗಳಿಗೆ ಎಷ್ಟು ಅನುದಾನ ಇದೆಯೋ, ಅದನ್ನು ಕೊಡುತ್ತಲೇ ಬಂದಿದ್ದೆವೆ ಅನ್ನುತ್ತಿದ್ದಾರಂತೆ. ಹಾಗಾದರೆ ಅಂಗನವಾಡಿ ಶಿಕ್ಷಕಿಯರಿಗೆ ಏಕೆ ಹಣ ಮುಟ್ಟಿಲ್ಲ‌‌‌ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹುಳುಗಳ ಪಾಲಾದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಗೋಧಿ

ಈ ಶಿಕ್ಷಕಿಯರು ಕೈಯಿಂದ ಹಣ ಹಾಕಿ ಮೊಟ್ಟೆ ತಂದು ಸುಸ್ತಾಗಿ‌ ಹೋಗಿದ್ದಾರೆ. ಇತ್ತ ಮೊಟ್ಟೆಗೆ ಹಣವನ್ನೂ ಕೊಡಬೇಕು, ಅತ್ತ ಗೌರವ ಧನ ಇಲ್ಲದೆ ಕೆಲಸ ಮಾಡಬೇಕು. ಹೀಗಾಗಿ ಬೇಗ ಹಣ ಬಿಡುಗಡೆ ಮಾಡದೇ ಇದ್ದರೆ, ಅಂಗನವಾಡಿ ಬಂದ್ ಮಾಡಿ ಹೋರಾಟ ಮಾಡುವ ನಿರ್ಧಾರ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್