AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th, PUC ಪಾಸಾದವರಿಗೆ ಸುವರ್ಣಾವಕಾಶ

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರೊಸೆಸ್ ಸರ್ವರ್, ಜವಾನ, ಟೈಪಿಸ್ಟ್ ಸೇರಿ ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. SSLC ಅಥವಾ PUC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಮಾಸಿಕ 27,000 ರಿಂದ 67,600ರೂ. ವರೆಗೆ ವೇತನ ಲಭ್ಯವಿದೆ. ಆಸಕ್ತರು ಸೆ.30 ರೊಳಗೆ yadgir.dcourts.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಈ ಕರ್ನಾಟಕ ಸರ್ಕಾರಿ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು.

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th, PUC ಪಾಸಾದವರಿಗೆ ಸುವರ್ಣಾವಕಾಶ
ಕರ್ನಾಟಕ ಸರ್ಕಾರಿ ಉದ್ಯೋಗImage Credit source: Getty Images
ಅಕ್ಷತಾ ವರ್ಕಾಡಿ
|

Updated on: Aug 29, 2026 | 4:31 PM

Share

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಖಾಲಿ ಹುದ್ದೆಗಳು ಮತ್ತು ವೇತನ ಶ್ರೇಣಿ:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ 9 ಪ್ರೊಸೆಸ್ ಸರ್ವರ್, 5 ಪ್ಯೂನ್ (ಜವಾನ), 5 ಟೈಪಿಸ್ಟ್ ಹಾಗೂ 4 ಟೈಪಿಸ್ಟ್-ಕಾಪಿಸ್ಟ್ ಹುದ್ದೆಗಳು ಸೇರಿವೆ. ಟೈಪಿಸ್ಟ್ ಹಾಗೂ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 31,775 ರಿಂದ 67,600 ರೂ. ವರೆಗೆ ವೇತನ ಸಿಗಲಿದೆ. ಜವಾನ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 27,000 ರಿಂದ 46,675 ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಅಥವಾ 12ನೇ ತರಗತಿ (PUC) ಉತ್ತೀರ್ಣರಾಗಿರಬೇಕು. ದಿನಾಂಕ 30-09-2026 ರಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ, SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ., ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 100ರೂ. ಹಾಗೂ SC/ST/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 50ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಅಭ್ಯರ್ಥಿಗಳು 30-09-2026 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಪ್ರಕಟಣೆಯನ್ನು ಸರಿಯಾಗಿ ಓದಿ, ಅಗತ್ಯವಿರುವ ದಾಖಲೆಗಳು, ಇ-ಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಂಡು yadgir.dcourts.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಾರ್ಮ್ ಭರ್ತಿ ಮಾಡಬೇಕು. ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಕಾಯ್ದಿರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು