ಯಾದಗಿರಿಯ ವೈದ್ಯರಿಗೆ ಕೊರೊನಾ ಸೋಂಕು; ಕೊವಿಡ್​ ಗೆದ್ದು ಇತರರಿಗೆ ಮಾದರಿಯಾದ ಕೊರೊನಾ ವಾರಿಯರ್ಸ್

ಯಾದಗಿರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಸಾಂಕ್ರಾಮಿಕ ರೋಗಗಳ ಜಿಲ್ಲಾ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಅಬ್ದುಲ್ ರಶೀದ್ ಅವರು ಕೊವಿಡ್​ನಿಂದ ಗೆದ್ದು ಬಂದಿದ್ದಾರೆ.

ಯಾದಗಿರಿಯ ವೈದ್ಯರಿಗೆ ಕೊರೊನಾ ಸೋಂಕು; ಕೊವಿಡ್​ ಗೆದ್ದು ಇತರರಿಗೆ ಮಾದರಿಯಾದ ಕೊರೊನಾ ವಾರಿಯರ್ಸ್
ಡಾ.ಅಬ್ದುಲ್ ರಶೀದ್
Follow us
preethi shettigar
|

Updated on: May 05, 2021 | 11:43 AM

ಯಾದಗಿರಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೊರೊನಾ ಸೋಂಕು ಹರಡದಂತೆ ಕರ್ತವ್ಯ ನಿರ್ವಹಿಸುವಲ್ಲಿ ಪೊಲೀಸರು ಮತ್ತು ವೈದ್ಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದರಲ್ಲೂ ಸೋಂಕಿತರ ಜೊತೆ ಇದ್ದು, ಅವರ ಆರೈಕೆ ಮಾಡುವಲ್ಲಿ ವೈದ್ಯರು ಪ್ರಮುಖರು. ಆದರೆ ಇತ್ತಿಚೇಗೆ ಕೊವಿಡ್ ವಾರಿಯರ್ಸ್​ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಕೊರೊನಾಗೆ ತುತ್ತಾಗಿದ್ದು, ಕೊವಿಡ್​ನಿಂದ ಗುಣಮುಖರಾಗುವಲ್ಲಿನ ಅವರ ಪ್ರಯತ್ನ ಇತರರಿಗೆ ಮಾದರಿಯಾಗಿದೆ.

ಯಾದಗಿರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಸಾಂಕ್ರಾಮಿಕ ರೋಗಗಳ ಜಿಲ್ಲಾ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಅಬ್ದುಲ್ ರಶೀದ್ ಅವರು ಕೊವಿಡ್​ನಿಂದ ಗೆದ್ದು ಬಂದಿದ್ದಾರೆ. ಡಾ.ಅಬ್ದುಲ್​ 20 ದಿನಗಳ ಹಿಂದೆ ಕಚೇರಿ ಕೆಲಸದ ನಿಮಿತ್ಯ ಬೆಂಗಳೂರಿಗೆ ಹೋಗಿ ವಾಪಸ್ ಮರಳಿದ್ದರು. ವಾಪಸ್ ಬಂದ ಕೂಡಲೇ ಅವರಿಗೆ ಕೊವಿಡ್ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಯಾವುದೇ ಭಯವಿಲ್ಲದೆ ಅವರು ಮನೆಗೆ ಹೋಗುವ ಬದಲು ನೇರವಾಗಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡರು. ಕೊವಿಡ್ ಟೆಸ್ಟ್ ಮಾಡಿಸಿಕೊಂಡಾಗ ಡಾ.ಅಬ್ದುಲ್ ರಶೀದ್​ಗೆ ಪಾಸಿಟಿವ್ ಪತ್ತೆಯಾಗಿತ್ತು.

ಪಾಸಿಟಿವ್ ಎಂದು ತಿಳಿದ ಕೂಡಲೆ ತಕ್ಷಣ ಅವರು ಮನೆಯಲ್ಲಿ ಪತ್ನಿ, ಚಿಕ್ಕ ಮಕ್ಕಳು ಹಾಗೂ ಪೊಷಕರು ಇರುವ ಕಾರಣಕ್ಕೆ ಮನೆಗೆ ಹೋಗುವ ಬದಲು ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಾಗಿ ಸತತ 7 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದಾರೆ. ಸ್ವಲ್ಪ ಚೇತರಿಕೆ ಕಂಡ ಕೂಡಲೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಸ್ನೇಹಿತರ ಜೊತೆ ರೂಮ್ ನಲ್ಲಿ ಮತ್ತೆ 7 ದಿನಗಳ ಕಾಲ ಕ್ವಾರಂಟೈನ್ ಆಗಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಡಾ.ರಶೀದ್ ಅವರು ಕೊವಿಡ್ ಟೆಸ್ಟಿಂಗ್ ವಿಭಾಗದಲ್ಲೂ ಕೆಲಸ ಮಾಡುತ್ತಿದ್ದಾರೆ. ನಿತ್ಯ ಶೇಕರಣೆಯಾಗಿರುವ ಸ್ವ್ಯಾಬ್​ಅನ್ನು ಟೆಸ್ಟಿಂಗ್ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸುವ ಜವಾಬ್ದಾರಿಯನ್ನ ಸಹ ನಿಭಾಯಿಸುತ್ತಿದ್ದಾರೆ. ಹೀಗಾಗಿ ಅವರು ಕೆಲಸದ ಒತ್ತಡದಲ್ಲೂ ಸಹ ಧೈರ್ಯದಿಂದ ಕೊವಿಡ್ ವಿರುದ್ಧ ಗೆದ್ದು ಬಂದಿದ್ದಾರೆ.

ಕೊವಿಡ್ ಕಳೆದ ವರ್ಷಕ್ಕಿಂತ ಈ ವರ್ಷ ಭಯನಕವಾಗಿದೆ ಆದರೆ ಹೆದರುವ ಅಗತ್ಯವಿಲ್ಲ. ಧೈರ್ಯದಿಂದ ಇರಬೇಕು. ಇನ್ನು ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸುವುದನ್ನು ಮರೆಯಬಾರದು ಜೊತೆಗೆ ಸಾಮಾಜಿಕ ಅಂತರವನ್ನ ಕಾಪಾಡಿಕೊಳ್ಳಬೇಕು. ಕೊವಿಡ್ ಲಕ್ಷಣಗಳು ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸಬೇಕು ಇಲ್ಲವಾದಲ್ಲಿ ಸೋಂಕು ದೇಹದಲ್ಲಿ ಭಯಾನಕ ರೂಪನ್ನ ತಾಳುತ್ತದೆ. ಹೀಗಾಗಿ ರೋಗ ಲಕ್ಷಣಗಳು ಕಂಡು ಬಂದರೆ ನೇರವಾಗಿ ಆಸ್ಪತ್ರೆಗೆ ತೆರಳಿ ಟೆಸ್ಟ್ ಮಾಡಿಸಿ ವೈದ್ಯರ ಸಲಹೆ ಪಡೆಯುವುದು ಉತ್ತಮ ಎಂದು ಜಿಲ್ಲಾ ಅಸಂಕ್ರಾಮಿಕ ರೋಗಗಳ ಸಂಯೋಜಕರಾದ ಡಾ.ರಶೀದ್ ಹೇಳಿದ್ದಾರೆ.

ಇನ್ನು ರಶೀದ್ ಸಂಪರ್ಕಕ್ಕೆ ಬಂದಿದ್ದ ಇವರ ಕಚೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ನೌಕರ ಶಿವಾಜಿ ಅವರಿಗೂ ಪಾಸಿಟಿವ್ ಬಂದಿತ್ತು. ವೈದ್ಯರ ಸಲಹೆಯಂತೆ ಶಿವಾಜಿ ಅವರು ಮನೆಯಲ್ಲಿಯೇ 7 ದಿನ ಕ್ವಾರಂಟೈನ್ ಆಗಿದ್ದರು. ಅಂತೆಯೇ ಶಿವಾಜಿ ಧೈರ್ಯದಿಂದ ಮನೆಯಲ್ಲಿಯೇ ಇದ್ದು ಕೊವಿಡ್ ವಿರುದ್ಧ ಗೆದ್ದು ಬಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಎರಡನೇ ಅಲೆ ಭಯಾನಕವಾಗಿದೆ. ಆದರೆ ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ ಧೈರ್ಯದಿಂದ ಇದ್ದು, ಕೊವಿಡ್ ಮಾರ್ಗಸೂಚಿಯನ್ನ ಸರಿಯಾಗಿ ಪಾಸಿಲಿದರೆ ಸಾಕು ಕೊರೊನಾ ವಿರುದ್ಧ ಗೆಲ್ಲಬಹುದು ಎನ್ನುವುದಕ್ಕೆ ಈ ಇಬ್ಬರು ವಾರಿಯರ್ಸ್​ಗಳೇ ಉದಾಹರಣೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

ಪೊಲೀಸ್ ವೃತ್ತಿ ಜೊತೆಗೆ ಹಾವು ಹಿಡಿಯುವ ಪ್ರವೃತ್ತಿ; ಹಾವೇರಿ ಕಾನ್​ಸ್ಟೇಬಲ್ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್