AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಆಪ್ತ, ಬಿಜೆಪಿ ಹಿರಿಯ ನಾಯಕ ವೆಂಕಟರೆಡ್ಡಿ ಮುದ್ನಾಳ ವಿಧಿವಶ

ಯಾದಗಿರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಬಿಎಸ್​ ಯಡಿಯೂರಪ್ಪ ಆಪ್ತರಾಗಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಅವರು ಇಂದು ನಿಧನ ಹೊಂದಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು ಚಿಕತ್ಸೆ ಫಲಕಾರಿಯಾಗದೇ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಯಡಿಯೂರಪ್ಪ ಆಪ್ತ, ಬಿಜೆಪಿ ಹಿರಿಯ ನಾಯಕ ವೆಂಕಟರೆಡ್ಡಿ ಮುದ್ನಾಳ ವಿಧಿವಶ
ಯಡಿಯೂರಪ್ಪ ಆಪ್ತ, ಬಿಜೆಪಿ ಹಿರಿಯ ನಾಯಕ ವೆಂಕಟರೆಡ್ಡಿ ಮುದ್ನಾಳ ವಿಧಿವಶ
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 17, 2024 | 7:53 PM

Share

ಯಾದಗಿರಿ, ಸೆಪ್ಟೆಂಬರ್​ 17: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) (venkatreddy mudnal) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಮುದ್ನಾಳ​, ಕಳೆದ ಕೆಲ ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಮಗ ಮತ್ತು ಮಗಳು ಇದ್ದಾರೆ. ನಾಳೆ ಸ್ವಗ್ರಾಮ ಮುದ್ನಾಳ​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಆಪ್ತರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಯಾದಗಿರಿ ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಒಂದೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು ಯಾದಗಿರಿ ಜಿಲ್ಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರು ಎನಿಸಿಕೊಂಡಿದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೆನ್ನಾರೆಡ್ಡಿ ವಿರುದ್ಧ ಮುದ್ನಾಳ ಸೋಲು ಕಂಡಿದ್ದರು.

ಇದನ್ನೂ ಓದಿ: ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ

ವೆಂಕಟರೆಡ್ಡಿ ಮುದ್ನಾಳ ಅವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಪಶುಸಂಗೋಪನೆ ಸಚಿವ ವಿಶ್ವನಾಥ ರೆಡ್ಡಿ ಮುದ್ನಾಳ ಅವರ ಪುತ್ರ. ವೆಂಕಟರೆಡ್ಡಿ ಅವರು ಮಾರ್ಚ್ 28, 1954 ರಂದು ಜನಿಸಿದ್ದಾರೆ. ಬಿ.ಕಾಂ ಪದವಿ ಪಡೆದಿರುವ ಅವರು 2018-2023ರ ವರೆಗೆ ಶಾಸಕರಾಗಿದ್ದರು.

ಬಿವೈ ವಿಜಯೇಂದ್ರ ಟ್ವೀಟ್​

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್​ ಮಾಡಿದ್ದು, ಯಾದಗಿರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವೆಂಕಟರೆಡ್ಡಿಗೌಡ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ನೇರ ನಡೆ ನುಡಿಗೆ ಹೆಸರಾಗಿ ನೈಜ ಜನಕಾಳಜಿಯ ಹಿರಿಯ ನಾಯಕರಾಗಿದ್ದ ಮಾನ್ಯ ಮುದ್ನಾಳ್ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:35 pm, Tue, 17 September 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ