Yadgir: ನೇಹಾ ಹತ್ಯೆ ಕಹಿ ನೆನಪು ಮಾಸುವ ಮುನ್ನವೇ ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳ ಹೆಚ್ಚುತ್ತಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಭಜನೆ ಕೇಳಿದಕ್ಕೆ ಮತ್ತು ಜೈ ಶ್ರೀರಾಂ ಘೋಷಣೇ ಕೂಗಿದ್ದವರ ಮೇಲೆ ಹಲ್ಲೆ ಮಾಡಲಾಗಿತ್ತು. ಬಳಿಕ ನೇಹಾ ಹತ್ಯೆ. ಇದೀಗ ಮತ್ತೊಂದು ಕೊಲೆ ವರದಿಯಾಗಿದೆ. ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ ಮಾಡಲಾಗಿದೆ.

Yadgir: ನೇಹಾ ಹತ್ಯೆ ಕಹಿ ನೆನಪು ಮಾಸುವ ಮುನ್ನವೇ ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ
ಮೃತ ಯುವಕ ರಾಕೇಶ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Apr 22, 2024 | 3:19 PM

ಯಾದಗಿರಿ, ಏಪ್ರಿಲ್​ 22: ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿರುವಾಗ ರಾಜ್ಯದಲ್ಲಿ ಕೋಮು ಘರ್ಷಣೆ, ಹಲ್ಲೆ, ಕೊಲೆ (murder) ಪ್ರಕರಣಗಳ ಸಂಖ್ಯೆ ಹೆಚ್ಚಾಗಲಾರಂಭವಾಗಿದೆ. ಕೆಲವು ದಿನಗಳ ಹಿಂದೆ ರಾಮನ ನವಮಿ ದಿವಸ ಬೆಂಗಳೂರಿನಲ್ಲಿ ಜೈ ಶ್ರೀರಾಂ ಘೋಷಣೇ ಕೂಗಿದ್ದವರ ಮೇಲೆ ಹಲ್ಲೆ ಮಾಡಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ನಂತರ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ (neha murder case) ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆ ಮಾಡಿದ್ದಾನೆ. ರಾಕೇಶ್ (22) ಕೊಲೆಯಾದ ಯುವಕ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ.

ನಿನ್ನೆ ರಾತ್ರಿ ರೊಟ್ಟೆ ಕೇಂದ್ರಕ್ಕೆ ರೊಟ್ಟಿ ತರಲು ರಾಕೇಶ್ ಹೋಗಿದ್ದ. ಇದೇ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಕಿರಿಕ್ ಆಗಿದೆ. ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳವಾಗಿದ್ದು, ಈ ವೇಳೆ ರಾಕೇಶ್​ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು

ಇನ್ನು ಆರೋಪಿ, ಕೊಲೆಯಾದ ಯುವಕನ ಕುಟುಂಬದ ನಡುವೆ ನಿನ್ನೆ ರಾತ್ರಿ 11 ಗಂಟೆ ಘಟನೆ ಕೊಲೆ ನಂತರ ಸಂಧಾನ ಮಾತುಕತೆ ಮಾಡಲಾಗಿದೆ. ಇದಾದ ನಂತರ ಬಿಜೆಪಿ ಮುಖಂಡರ ನೆರವಿನಲ್ಲಿ ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್​ಪಿ ಸಂಗೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ

ಪೊಲೀಸರು ಸ್ಥಳಕ್ಕೆ ಬಂದ ನಂತರ ರಾಕೇಶ್ ಶವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಾದಗಿರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Mon, 22 April 24

ತಾಜಾ ಸುದ್ದಿ