ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 23, 2024 | 6:08 PM

ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರಿ ಮಳೆ ಹಿನ್ನಲೆ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ಘಟನೆ ನಡೆದಿದೆ. ಇನ್ನು ಮೂರು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವು
ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು
Follow us on

ಯಾದಗಿರಿ ಸೆಪ್ಟೆಂಬರ್​ 23: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿರುವಂತಹ (died) ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ಜಮೀನಿನಲ್ಲಿ ನಡೆದಿದೆ. ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತರು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾವಿನಲ್ಲೂ ಒಂದಾದ ಪತಿ-ಪತ್ನಿ

ಹುಬ್ಬಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮ ಇಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಹೃದಯಾಘಾತದಿಂದ ಬೆಳಗ್ಗೆ ಪತಿ ಮೃತಪಟ್ಟರೆ, ವಯೋಸಹಜ ಕಾಯಿಲೆಯಿಂದ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಪತ್ನಿ ಮೃತಪಟ್ಟಿದ್ದಾರೆ. ಶಂಕ್ರಪ್ಪ ಹೊಂಬಳ(72) ಮತ್ತು ಪತ್ನಿ ಅನ್ನಪೂರ್ಣ ಸಾವಿನಲ್ಲೂ ಒಂದಾದ ಪತಿ-ಪತ್ನಿ. ಒಂದೇ ದಿನ ಸಾವನ್ನಪ್ಪಿದ ದಂಪತಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕ ಸಾವು

ಮೈಸೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, 5 ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಲಿಖಿತ್ ಮೃತ‌ ಮಗು. ಬೈಕ್​ಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಹುಬ್ಬಳ್ಳಿ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡಿನ ದಾಳಿ

ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಮಗು ಕಳೆದುಕೊಂಡು ಪೋಷಕರು ರೋಧಿಸುತ್ತಿದ್ದಾರೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅನುಮಾನಸ್ಪದ ರೀತಿಯಲ್ಲಿ 12 ಮೇಕೆಗಳು ಸಾವು

ಚಾಮರಾಜನಗರ: ಅನುಮಾನಸ್ಪದ ರೀತಿಯಲ್ಲಿ 12 ಮೇಕೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರುಪುರ ಗ್ರಾಮದಲ್ಲಿ ನಡೆದಿದೆ. ವಿಷಪೂರಿತ ಸೊಪ್ಪು ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು ಮಹಾಲಕ್ಷ್ಮೀ ಕೊಲೆ: ಸ್ನೇಹಿತ ಅಶ್ರಫ್​ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

ಮತೃ 12 ಮೇಕೆ ಮರಿಗಳು ಶಾರದಮ್ಮ ಎಂಬುವವರಿಗೆ ಸೇರಿದ್ದವು. ಮೇಕೆಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಮೇಕೆಗಳನ್ನು ಕಂಗಾಲಾಗಿದ್ದಾರೆ. ಸದ್ಯ ಮೃತ ಮೇಕೆಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ವರದಿ ಬಂದ ಬಳಿಕ ಅಸಲಿ ಕಾರಣ ತಿಳಿಯಲಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:06 pm, Mon, 23 September 24