ಯಾದಗಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ.
ಯಾದಗಿರಿ, ಮಾರ್ಚ್ 25: ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ. ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ.
59 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ
ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 44 ಸಾಮಾನ್ಯ, 9 ಸೂಕ್ಷ್ಮ ಹಾಗೂ 6 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಹೊಂದಲಾಗಿದೆ. 59 ಪರೀಕ್ಷಾ ಕೇಂದ್ರಗಳಲ್ಲಿ 19575 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 17292 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದಾರೆ. 1384 ಮರು ಪರೀಕ್ಷೆ ಬರೆಯುತ್ತಿದ್ದಾರೆ. ಉತ್ಸಾಹದಲ್ಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದತ್ತ ಆಗಮಿಸಿದ್ದರು.
ಇದನ್ನೂ ಓದಿ: SSLC Exam: ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆ ಇಂದು ಪ್ರಥಮ ಭಾಷೆ ಪರೀಕ್ಷೆ ಮುಕ್ತಾಯವಾಗಿದೆ. ಈ ವೇಳೆ ವಿಜಯಪುರದಲ್ಲಿ ಟಿವಿ9 ಜೊತೆಗೆ ಡಿಡಿಪಿಐ ಎಚ್ಎನ್ ನಾಗೂರ ಪ್ರತಿಕ್ರಿಯಿಸಿದ್ದು, ಜಿಲ್ಲೆಯ 127 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಒಟ್ಟು 41,749 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಇದರಲ್ಲಿ 39,992 ವಿದ್ಯಾರ್ಥಿಗಳು ಹಾಜರಾಗಿದ್ದರು. 841 ಪರೀಕ್ಷಾರ್ಥಿಗಳು ಗೈರಾಗಿದ್ದಾರೆ. ಉಳಿದಂತೆ ಸುಗಮವಾಗಿ ಪರೀಕ್ಷೆ ನಡೆದಿದೆ ಎಂದು ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು
ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ವಿದ್ಯಾರ್ಥಿ. ರಸ್ತೆ ದಾಟುವ ವೇಳೆ ವಿದ್ಯಾರ್ಥಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.