ಕ್ಷುಲ್ಲಕ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಜೂನ್ 5ರಂದು ಮೋಟಗಿ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಕುಡಿದ ಅಮಲಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಯನ್ನು ಐವರ ಗ್ಯಾಂಗ್ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಕುಡಿದು ಕೂಗಾಡುತ್ತಿದ್ದ ಐವರನ್ನು ಪ್ರಶ್ನಿಸಿದಕ್ಕೆ ಮಹೇಶ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಬಡಿಗೆಯಿಂದ ಬಡಿದು, ಕಾಲಿನಿಂದ ಒದ್ದು ಕೊಲೆ ಮಾಡಿದ್ದಾರೆ.
ಯಾದಗಿರಿ, ಜೂನ್ 21: ಕುಡಿದ ಅಮಲಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಯನ್ನು (Forest officer) ಐವರ ಗ್ಯಾಂಗ್ ಕೊಲೆ (death) ಮಾಡಿರುವಂತಹ ಘಟನೆ ಜಿಲ್ಲೆಯ ಶಹಾಪುರದಲ್ಲಿ ಜೂನ್ 5ರಂದು ಮೋಟಗಿ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಐವರ ಗ್ಯಾಂಗ್ ಬಾರ್ & ರೆಸ್ಟೋರೆಂಟ್ನಲ್ಲಿ ಕುಡಿದು ಕೂಗಾಡಿದ್ದಾರೆ. ಇದಕ್ಕೆ ಪ್ರಶ್ನಿಸಿದಕ್ಕೆ ಮಹೇಶ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಬಡಿಗೆಯಿಂದ ಬಡಿದು, ಕಾಲಿನಿಂದ ಒದ್ದು ಕೊಲೆ ಮಾಡಿದ್ದಾರೆ.
ಮೋಟಗಿ ರೆಸ್ಟೋರೆಂಟ್ ಹೊರಗೆ ಬಿದ್ದಿದ್ದ ಅರಣ್ಯಾಧಿಕಾರಿ ಮಹೇಶ್ ಶವವನ್ನು ಸಹಜ ಸಾವು ಎಂದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಬಳಿಕ ಸಹಜ ಸಾವಲ್ಲ ಕೊಲೆ ಎಂದು ಪತ್ನಿ ನಾಗವೇಣಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ
ಬಾರ್ & ರೆಸ್ಟೋರೆಂಟ್ ಸಿಸಿಕ್ಯಾಮರಾ ದೃಶ್ಯ ಪರಿಶೀಲಿಸಿದ್ದ ಪೊಲೀಸರು ಈ ವೇಳೆ ಹಲ್ಲೆ ನಡೆಸಿ ಕೊಂದಿರುವುದು ದೃಢಪಟ್ಟಿದೆ. ಹೀಗಾಗಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್, ಪ್ರಕಾಶ್ ಬಂಧಿತರು. ಕೇಸ್ ದಾಖಲಿಸಿಕೊಂಡಿರುವ ಶಹಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಹರಪನಹಳ್ಳಿ ತಾಲ್ಲೂಕಿನ ನಂದ್ಯಾಲ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ. ಹರಪನಹಳ್ಳಿ ಪಟ್ಟಣದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ತೌಸೀಫ್ (15), ಹಾಗೂ ನ್ಯಾಷನಲ್ ಶಾಲೆಯಲ್ಲಿ 8ನೇ ಓದುತ್ತಿದ್ದ ಸಮೀರ್ (14) ಮೃತ ಬಾಲಕರು.
ಇದನ್ನೂ ಓದಿ: Hassan Firing: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ, ವ್ಯಕ್ತಿಯ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ
ಕುಟುಂಬದವರೊಟ್ಟಿಗೆ ತೆರಳಿದ್ದ ಇಬ್ಬರು ಬಾಲಕರು ನದಿಯ ನೀರಿನ ಸೆಳೆತಕ್ಕೆ ಸಿಕ್ಕು ನೀರುಪಾಲಾಗಿದ್ದಾರೆ. ಹರಿಹರದ ನಾಲ್ಕು ಜನ ಈಜುಪಟುಗಳು ಹಾಗೂ ಹರಪನಹಳ್ಳಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸೇರಿ 11 ಜನರು ಸುಮಾರು ಹತ್ತು ಗಂಟೆ ಶೋಧ ಕಾರ್ಯ ಮಾಡಿದ್ದಾರೆ. ಬಳಿಕ ಸ್ವಲ್ಪ ದೂರದಲ್ಲಿ ಬಾಲಕರು ಶವವಾಗಿ ಪತ್ತೆ ಆಗಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.