AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಯಕ್ಷಗಾನ ಮಾಡುತ್ತಿದ್ದಾಗ ಅರ್ಜುನ್ ಪಾತ್ರಧಾರಿ ಮೋಹನ್ ಕುಮಾರ್ ಅಮ್ಮುಂಜೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.

ಮೂಡಬಿದಿರೆಯಲ್ಲಿ ವೇದಿಕೆಯಲ್ಲಿ ಕುಣಿಯುವಾಗಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ
ಮೋಹನ್ ಕುಮಾರ್ ಅಮ್ಮುಂಜೆ
TV9 Web
| Edited By: |

Updated on:Aug 10, 2021 | 7:21 PM

Share

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಯಕ್ಷಗಾನ ಮಾಡುತ್ತಿರುವಾಗ ಯಕ್ಷಗಾನ ಕಲಾವಿದ ವೇದಿಕೆಯಲ್ಲೇ ಕುಸಿದುಬಿದ್ದಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಯಕ್ಷಗಾನ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಎಂಬುವವರು ಯಕ್ಷಗಾನ ಮಾಡುತ್ತಿದ್ದಾಗಲೇ ತಲೆ ತಿರುಗಿ ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೂಡಬಿದಿರೆ ತಾಲೂಕಿನ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ನಿನ್ನೆ ರಾತ್ರಿ ನಡೆಯುತ್ತಿದ್ದ ‘ಕರ್ಣ ಪರ್ವ’ ಯಕ್ಷಗಾನ ಪ್ರಸಂಗದಲ್ಲಿ ಅರ್ಜುನ ಪಾತ್ರಧಾರಿಯಾಗಿದ್ದ ಮೋಹನ್ ಕುಮಾರ್ ಅಮ್ಮುಂಜೆ ಕರ್ಣನ ವೇಷಧಾರಿಯೊಂದಿಗೆ ವೇದಿಕೆಯಲ್ಲಿ ಸಂಭಾಷಣೆ ಮಾಡುತ್ತಾ ಕುಣಿಯುತ್ತಿದ್ದಾಗ ತಲೆ ತಿರುಗಿ ಬಿದ್ದಿದ್ದಾರೆ. ತಕ್ಷಣ ವೇದಿಕೆಯಲ್ಲಿದ್ದ ಕಲಾವಿದರು ಹಾಗೂ ಹಿಮ್ಮೇಳದವರು ಮೋಹನ್ ಕುಮಾರ್ ಅವರನ್ನು ಎತ್ತಿ ಕೂರಿಸಿದ್ದಾರೆ.

ಕೊರೊನಾದಿಂದಾಗಿ ಹಲವು ತಿಂಗಳಿಂದ ಯಕ್ಷಗಾನ ಪ್ರದರ್ಶನ ನಡೆಯದ ಕಾರಣ ಇದ್ದಕ್ಕಿದ್ದಂತೆ ವೇದಿಕೆ ಏರಿದಾಗ ಫೋಕಸ್ ಲೈಟ್​ನಿಂದ ತಲೆ ತಿರುಗಿದೆ. ನಾನೀಗ ಆರೋಗ್ಯವಾಗಿದ್ದೇನೆ ಎಂದು ಮೋಹನ್ ಕುಮಾರ್ ತಿಳಿಸಿದ್ದಾರೆ. ಕೊಂಚ ಚೇತರಿಸಿಕೊಂಡ ಬಳಿಕ ನಿನ್ನೆ ತಾವೇ ಅರ್ಜುನನ ಪಾತ್ರವನ್ನು ಮೋಹನ್ ಕುಮಾರ್ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ

(Yakshagana Artist Fell Down while Performing Yakshagana in Stage at Mudbidri)

Published On - 7:13 pm, Tue, 10 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?