ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು ನಿಧನ
ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು(67) ಗುರುವಾರ ಉಡುಪಿಯ ಹಡಿನಬಾಳು ಗ್ರಾಮದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾರವಾರ: ಪ್ರಖ್ಯಾತ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು(67) ಗುರುವಾರ ಉಡುಪಿಯ ಹಡಿನಬಾಳು ಗ್ರಾಮದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಚೇತರಿಸಿಕೊಂಡಿದ್ದರು. ಆದರೆ ಪುನಃ ಅನಾರೋಗ್ಯ ಕಾಣಿಸಿಕೊಂಡ ಕಾರಣ ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಪಾದ ಅವರು ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ.
ಇವರು ರಾಜ್ಯದ ಎಲ್ಲಾ ಪ್ರಖ್ಯಾತ ಮೇಳಗಳಲ್ಲೂ ಅತಿಥಿ ಕಲಾವಿದರಾಗಿ ಪಾತ್ರ ಮಾಡುತ್ತಿದ್ದರು. ಇಡುಗುಂಜಿ ಮಹಾಗಣಪತಿ ಮೇಳದಲ್ಲಿ ಮೂಲಕಲಾವಿದರಾಗಿದ್ದರು. ಇಡಗುಂಜಿ ಮಹಾಗಣಪತಿ ಮೇಳದ 2 ತಲೆಮಾರಿನ ಕೊಂಡಿಯಗಿ ಕಾರ್ಯನಿರ್ವಹಿಸಿದ್ದರು.