Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳ್ಳಾಪುರ ಅಪಘಾತ: ಎರಡು ತಿಂಗಳ ಹಿಂದೆ ಮದುವೆಯಾದ ಯುವಕನೂ ಸಾವು, ಕುಟುಂಬಸ್ಥರ ಆಕ್ರಂದನ

ಉತ್ತರ ಕನ್ನಡದ ಯಲ್ಲಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮದುವೆಯಾದ ಯುವಕನೊಬ್ಬನೂ ಮೃತಪಟ್ಟಿರುವುದು ತಿಳಿದುಬಂದಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ಮಧ್ಯೆ, ಕಿಮ್ಸ್ ಆಸ್ಪತ್ರೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದೆ ಎಂಬ ಆರೋಪ ಕೇಳಿಬಂದಿದ್ದು, ಆಡಳಿತವು ಆರೋಪವನ್ನು ತಳ್ಳಿಹಾಕಿದೆ.

ಗುಳ್ಳಾಪುರ ಅಪಘಾತ: ಎರಡು ತಿಂಗಳ ಹಿಂದೆ ಮದುವೆಯಾದ ಯುವಕನೂ ಸಾವು, ಕುಟುಂಬಸ್ಥರ ಆಕ್ರಂದನ
ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Jan 22, 2025 | 11:22 AM

ಹುಬ್ಬಳ್ಳಿ, ಹಾವೇರಿ, ಜನವರಿ 22: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆ ಸವಣೂರಿನ ಅಸ್ಲಂ ಬಾಬುಲಿ ಬೆಣ್ಣಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರ ಸಂಬಂಧಿ ದಾದಾಪೀರ ‘ಟಿವಿ9’ ಮುಂದೆ ನೋವು ತೋಡಿಕೊಂಡು ಕಣ್ಣೀರು ಹಾಕಿದ್ದಾರೆ.

ಘಟನೆ ಬಗ್ಗೆ ಸವಣೂರ ನಿವಾಸಿ ಇಮ್ರಾನ್ ‘ಟಿವಿ9’ ಜತೆ ಮಾತನಾಡಿ, ‘ನಮಗೆ ಇನ್ನು ಮುಂದೆ ಸಂತೆಗೆ ಹೋಗಬಾರದು ಅನಿಸುತ್ತಿದೆ. ನಮ್ಮ ಮನೆಲಿ ಸಂತೆ ಅಂದ್ರೆ ತಗೊಂಡು ಹೊಡೆಯುತ್ತಾರೆ’ ಎಂದಿದ್ದಾರೆ. ನಾವು ಕೂಡ ಪ್ರತಿ ವಾರ ಸಂತೆಗೆ ಹೋಗುತ್ತಿದ್ದೆವು. ಆದರೆ, ಇವತ್ತು ತರಕಾರಿ ಇರದ ಕಾರಣಕ್ಕೆ ಹೋಗಿಲ್ಲ. ಇಂಥ ದುರ್ಘಟನೆ ಸಂಭವಿಸಬಾರದಿತ್ತು ಎಂದಿದ್ದಾರೆ.

ಏತನ್ಮಧ್ಯೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಿಂದೇಟು ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ್ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಬೆಳಗಿನ ಜಾವ 6:30ಕ್ಕೆ ಯಲ್ಲಾಪುರ ಹತ್ತಿರ ಅವಘಡ ಸಂಭವಿಸಿದೆ. 26 ಕೂಲಿ ಕಾರ್ಮಿಕರು ಅಪಘಾತಕ್ಕಿಡಾಗಿದ್ದಾರೆ. ನಮ್ಮಲ್ಲಿ 11 ಜನ ಬಂದಿದ್ದರು, ಅದರಲ್ಲಿ ಒಬ್ಬ ಸ್ಥಳದಲ್ಲೇ ತೀರಿಹೋಗಿದ್ದರು. ಗಾಯಾಳುಗಳಿಗೆ ಬೇಕಾದ ಚಿಕಿತ್ಸೆ ಈಗಾಗಲೇ ನೀಡಲಾಗಿದೆ. ಡಾ.ರಾಜಶೇಖರ್ ನೇತೃತ್ವದ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಗಾಯಾಳುಗಳನ್ನ ಈಗ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದಿಂದ ಸೂಕ್ತ ಪರಿಹಾರ: ಸಿಎಂ ಭರವಸೆ

ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರು ಅಪಘಾತಗಳಲ್ಲಿ 14 ಜನ ಮೃತಪಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ಟ್ವೀಟ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮೃತರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು