AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Mar 19, 2026 | 4:49 PM

Share

ದಾವಣಗೆರೆ ಉಪಚುನಾವಣೆ ಕುರಿತು ಯತ್ನಾಳ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಯಡಿಯೂರಪ್ಪ ಕುಟುಂಬ ಮತ್ತು ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಶಾಮನೂರು ಮಲ್ಲಿಕಾರ್ಜುನ್ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ ಎಂದು ಯತ್ನಾಳ್‌ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ, ಮಾರ್ಚ್​​ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದರೆ, ದಾವಣಗೆರೆಯಲ್ಲಿ ಯಡಿಯೂರಪ್ಪ ಶಾಮನೂರಿಗೆ ಮತ ಹಾಕಿ ಎಂದು ಹೇಳಿದ್ದರು . ಒಂದೊಮ್ಮೆ ದಾವಣಗೆರೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ,  ಹಾಲಿ ಬಿಜೆಪಿ ಅಭ್ಯರ್ಥಿಯಿಂದ ಟಿಕೆಟ್​​ ಹಿಂಪಡೆದು ಶಾಮನೂರು ಮಲ್ಲಿಕಾರ್ಜುನ್ ಅವರ ಪುತ್ರನಿಗೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 19, 2026 04:46 PM
Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More