ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಸಂಬಳ ವಿಳಂಬವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಟಿವಿ9 ವಿಸ್ತ್ರೂತವಾಗಿ ವರದಿ ಪ್ರಸಾರ ಮಾಡಿತ್ತು. ಟಿವಿ9 ವರದಿಯಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಂಬಳ ನೀಡಲು ಒಪ್ಪಿಗೆ ಸೂಚಿಸಿದೆ.
ಈ ಬಗ್ಗೆ ಮಾತಾನಾಡಿರುವ ಲಕ್ಷ್ಮಣ ಸವದಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಮನವಿಗೆ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ624 ಕೋಟಿ ರೂಪಾಯಿ ನೀಡುವುದಕ್ಕೆ ಒಪ್ಪಿಕ್ಕೆ ಸೂಚಿಸಿದ್ದಾರೆ. ತಕ್ಷಣವೇ 2 ತಿಂಗಳ ವೇತನ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ಸಿಎಂ ಭೇಟಿ ಬಳಿಕ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಡಿಸೆಂಬರ್ ತಿಂಗಳ ವೇತನ ನಂತರ ಬಿಡುಗಡೆ ಮಾಡುತ್ತಾರೆ ಎಂದು ಭರವಸೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.