ಸಿಎಂ ಯಡಿಯೂರಪ್ಪ ಪರ ಪೇಜಾವರ ಶ್ರೀಗಳ ಬ್ಯಾಟಿಂಗ್; ಯಡಿಯೂರಪ್ಪರ ತಂಟೆಗೆ ಬರದಂತೆ ವಿವಿಧ ಮಠಾಧೀಶರಿಂದಲೂ ಎಚ್ಚರಿಕೆ

Karnataka Politics: ಮುಂದಿನ 2 ವರ್ಷ ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸಲಿ. ಇಲ್ಲ ಅಂದ್ರೆ ರಾಜ್ಯದಲ್ಲಿ ಬಿಜೆಪಿಗೆ ಉಳಿಗಾಲವಿಲ್ಲ. ವೀರಶೈವರಿಗೆ ಅಷ್ಟೇ ಅಲ್ಲ ಮಠ-ಮಂದಿರ ಚರ್ಚ್, ಮಸೀದಿ ಸೇರಿದಂತೆ ಎಲ್ಲಾ ಜನಾಂಗದವರಿಗೂ ಬಿಎಸ್‌ವೈ ಅನುಕೂಲ ಮಾಡಿದ್ದಾರೆ. ಅವರನ್ನು ಕೆಳಗಿಳಿಸಲು ವೀರಶೈವ ಸಮಾಜ ಅವಕಾಶ ಕೊಡಲ್ಲ ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಹಿರೇಮಠ ಶಿವಶಾಂತ ವೀರ ಶಿವಾಚಾರ್ಯಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಯಡಿಯೂರಪ್ಪ ಪರ ಪೇಜಾವರ ಶ್ರೀಗಳ ಬ್ಯಾಟಿಂಗ್; ಯಡಿಯೂರಪ್ಪರ ತಂಟೆಗೆ ಬರದಂತೆ ವಿವಿಧ ಮಠಾಧೀಶರಿಂದಲೂ ಎಚ್ಚರಿಕೆ
ಪೇಜಾವರ ವಿಶ್ವಪ್ರಸನ್ನ ಸ್ವಾಮಿಜಿ
Follow us
TV9 Web
| Updated By: guruganesh bhat

Updated on:Jul 20, 2021 | 4:03 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ರಾಜ್ಯದ ವಿವಿಧ ಮಠಾಧೀಶರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ (CM BS Yediyurappa) ಅವರನ್ನು ತೆರವುಗೊಳಿಸುತ್ತಾರೆ ಎಂದ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ‘ರಾಜ್ಯದ ಈ ಪರಿಸ್ಥಿತಿಯಲ್ಲಿ (Karnataka Politics) ಸಿಎಂ ಬದಲಾವಣೆ ಮಾಡಬಾರದು. ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೊವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಿಎಂ ಯಡಿಯೂರಪ್ಪಗೆ ಬೆಂಬಲ ವ್ಯಕ್ತಪಡಿಸಿರುವ ವಿವಿಧ ಜಿಲ್ಲೆಗಳ ಮಠಾಧೀಶರು  ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ದಿಂಗಾಲೇಶ್ವರ ಸ್ವಾಮೀಜಿ, ಸಿಎಂ ಯಡಿಯೂರಪ್ಪ ನನ್ನ ಕೈಯಲ್ಲಿ ಏನೂ ಇಲ್ಲ ಎಲ್ಲ ಹೈಕಮಾಂಡ್ ನಿರ್ಧಾರ ಎಂದರು. ಒಂದೊಮ್ಮೆ ಯಡಿಯೂರಪ್ಪರನ್ನು ಬದಲಿಸಿದರೆ ಬಿಜೆಪಿ ಸರ್ವನಾಶವಾಗಲಿದೆ. ಯಾವುದೇ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಬದಲಿಸಿದರೆ ಬಿಜೆಪಿ ನಾಯಕರು ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ಎಲ್ಲರ ಅಭಿಪ್ರಾಯವನ್ನು ಒಟ್ಟಿಗೆ ಹೇಳುತ್ತಿದ್ದೇವೆ. ಉಳಿದ ಅವಧಿ ಯಡಿಯೂರಪ್ಪರನ್ನು ಮುಂದುವರಿಸಬೇಕು ಬಿಜೆಪಿ ಹೈಕಮಾಂಡ್​ಗೆ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು. ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಅವರು ಅಗ್ರಗಣ್ಯ ನಾಯಕ. 2-3 ದಿನದಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಸೇರುತ್ತೇವೆ. ಬೆಂಗಳೂರಿನಲ್ಲೇ ಸಭೆ ಸೇರಿ ಮಠಾಧೀಶರು ನಿರ್ಣಯಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪರ ಬೆನ್ನಿಗೆ ಶ್ರೀ ಶೈಲ ಜಗದ್ಗುರು ಪೀಠ ಇದೆ. ಇದರಲ್ಲಿ ಎರಡು ಮಾತಿಲ್ಲ. ಸ್ಪಷ್ಟವಾಗಿ ಶ್ರೀ ಶೈಲ ಜಗದ್ಗುರು ಪೀಠ ಅವರೊಂದಿಗೆ ಇದೆ. ಸದ್ಯ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುವುದು ಸೂಕ್ತ. ಬಿಜೆಪಿ ಹೈ ಕಮಾಂಡ ಬಿಎಸ್ ವೈ ಅವರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು. ರಾಜ್ಯದ ಜನ ಯಡಿಯೂರಪ್ಪ ಅವರನ್ನ ಒಬ್ಬ ಜನನಾಯಕ ಎಂದು ಒಪ್ಪಿಕೊಂಡಿದ್ದಾರೆ. ಕಾರಣ ಅವರು ಸಿಎಂ ಆದ ಬಳಿಕ ನಡೆದ ಚುನಾವಣೆ ಗಳೇ ಇದಕ್ಕೆ ಉತ್ತರ. ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಆಡಿಯೋ ಸಹ ಬಿಡುಗಡೆ ಆಗಿದೆ‌. ಅದು ತಮ್ಮದಲ್ಲ ಎಂದು ಅವರೇ ಹೇಳಿದ್ದಾರೆ. ಹೀಗೆ ತೆರೆಮರೆಯಲ್ಲಿ ಕೆಲ ಚಟುವಟಿಕೆ ಗಳು ನಡೆಯುತ್ತಿವೆ. ಇದರ ಬಗ್ಗೆ ಇನ್ನಷ್ಟು ದಿನ ಕಾಯ್ದು ಸಮ ಪೀಠಾಧಿಪತಿಗಳೊಂದಿಗೆ ಸಮಾಲೋಚನೆ ನಡೆಸಿ ಪ್ರತಿಕ್ರಿಯೆ ನೀಡಲಾಗುವುದು. ವೀರಶೈವ ಮಹಾಸಭೆ ಪಂಚಪೀಠಗಳು ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರ ಪರ ಇವೆ.  ಇದರಲ್ಲಿ ಎರಡು ಮಾತಿಲ್ಲ. ಮೇಲಾಗಿ ಗುರುಪೂರ್ಣಿಮೆ ಪ್ರಯುಕ್ತ ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇವೆ. ಅಗತ್ಯ ಬಿದ್ದರೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಾಗುವುದು ಎಂದು ದಾವಣಗೆರೆಯಲ್ಲಿ ಶ್ರೀಶೈಲ ಜಗದ್ಗುರು ಪೀಠದ ಡಾ.ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

ಮುಂದಿನ 2 ವರ್ಷ ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸಲಿ. ಇಲ್ಲ ಅಂದ್ರೆ ರಾಜ್ಯದಲ್ಲಿ ಬಿಜೆಪಿಗೆ ಉಳಿಗಾಲವಿಲ್ಲ. ವೀರಶೈವರಿಗೆ ಅಷ್ಟೇ ಅಲ್ಲ ಮಠ-ಮಂದಿರ ಚರ್ಚ್, ಮಸೀದಿ ಸೇರಿದಂತೆ ಎಲ್ಲಾ ಜನಾಂಗದವರಿಗೂ ಬಿಎಸ್‌ವೈ ಅನುಕೂಲ ಮಾಡಿದ್ದಾರೆ. ಅವರನ್ನು ಕೆಳಗಿಳಿಸಲು ವೀರಶೈವ ಸಮಾಜ ಅವಕಾಶ ಕೊಡಲ್ಲ ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಹಿರೇಮಠ ಶಿವಶಾಂತ ವೀರ ಶಿವಾಚಾರ್ಯಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಎರಡು ವರ್ಷಗಳ ಕಾಲ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು. ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ 3000 ಕ್ಕೂ ಹೆಚ್ಚು ಮಠಗಳು ಅವರನ್ನು ಉಳಿಸಿಕೊಳ್ಳುತ್ತೇವೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ‌ಸಿಎಂ ಆಗಿ ಮುಂದುವರೆಯಬೇಕು. ಸಿಎಂ ಬದಲಾವಣೆ ಆಗಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಬೆಳ್ಳಾವಿ ಮಠದ ಮಹಂತಲಿಂಗೇಶ್ವರ ಸ್ವಾಮಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 

‘ಇನ್ನೂ ಒಂದೂವರೆ ವರ್ಷ ಯಡಿಯೂರಪ್ಪನವರೇ ಆಡಳಿತ ನಡೆಸಲಿ ಎಂಬುದು ನಮ್ಮ ಆಸೆ..‘-ಜಿ.ಪರಮೇಶ್ವರ್​

ದೆಹಲಿ ಆಂಗ್ಲ ಪತ್ರಿಕೆಯಲ್ಲಿ ರಾಜ್ಯ ಬಿಜೆಪಿ ಸಚಿವೆಯಿಂದ ಮುಖಪುಟ ಜಾಹೀರಾತು! ಆದ್ರೆ ಯಡಿಯೂರಪ್ಪ ಫೋಟೋ ಮಾಯ! ಏನಿದರ ಮಾಯೆ?

(Yediyurappa as CM Udupi Pejavara Shri and various Muthadishs batts fos)

Published On - 3:17 pm, Tue, 20 July 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ