ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi

Updated on:Mar 05, 2024 | 6:24 PM

ಕಾರವಾರ, ಮಾ.5: ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ಇದೀಗ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್ ಅವರು ತಮ್ಮ ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದರು. ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿಗೆ ಆಘಾತ ನೀಡಿದ್ದರು. ಈ ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

Shivaram Hebbar

ಶಿವರಾಮ್ ಹೆಬ್ಬಾರ್​ ಯಾರ ಸಂಪರ್ಕಕ್ಕೂ ಸಿಗದೇ ಫೋನ್ ಸ್ವಿಚ್ ಆಫ್​ ಮಾಡಿಕೊಂಡು ಅಜ್ಞಾತ ಸ್ಥಳದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಅವರು ಮಾಧ್ಯಮಗಳ ಮೂಲಕ ಬಂದು ಮತದಾನ ಮಾಡುವಂತೆ ಹೆಬ್ಬಾರ್​ಗೆ ಮನವಿ ಮಾಡಿದ್ದರು. ಆದರೂ ಸಹ ಹೆಬ್ಬಾರ್​ ಮತದಾನಕ್ಕೆ ಗೈರಾಗುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಈ ಇಬ್ಬರು ನಾಯಕರ ವಿರುದ್ಧ ಬಿಜೆಪಿ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: ನಾಲ್ಕು ದಶಕಗಳಿಂದ ರಾಜಕಾರಣದಲ್ಲಿರುವ ನನಗೆ ಯಾರ ಹೆದರಿಕೆಯೂ ಇಲ್ಲ: ಶಿವಾರಂ ಹೆಬ್ಬಾರ್, ಶಾಸಕ

ಈ ಬಗ್ಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ಬೆಳಗ್ಗೆ ಅನಾರೋಗ್ಯ ಕಾಡುತ್ತಿತ್ತು, ವೈದ್ಯರು ವಿಶ್ರಾಂತಿಯ ಸಲಹೆ ನೀಡಿದ್ದರು, ಹಾಗಾಗಿ ಮತದಾನ ಮಾಡಲು ಹೋಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಬೆಂಗಳೂರಲ್ಲೇ ಇದ್ದ್ದುಕೊಂಡು ಮತದಾನ ಮಾಡಲು ಹೋಗದಿರುವಂಥ ಪರಿಸ್ಥಿತಿಯೇನೂ ಇರಲಿಲ್ಲ, 4 ದಶಕಗಳಿಂದ ರಾಜಕಾರಣದಲ್ಲಿರುವ ತಾನು ಯಾರದ್ದೋ ಮರ್ಜಿಗೆ ಬಿದ್ದು ಹೆದರುವ ಜಾಯಮಾನದವನಲ್ಲ ಎಂದಿದ್ದರು. ಪಕ್ಷದ ಮೇಲಿನ ಅಸಮಾಧಾನಕ್ಕೇನಾದರೂ ಮತದಾನ ಬಹಿಷ್ಕರಿಸಿದಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಅವರು, ಅಸಮಾಧಾನ ಮತ್ತು ಮತದಾನ ಬಹಿಷ್ಕಾರದ ನಡುವೆ ಯಾವುದೇ ಸಂಬಂಧವಿಲ್ಲ ಎಂದಿದ್ದರು.

ಮಾತುಕತೆಯಂತೆ ನಡೆದುಕೊಂಡಿದ್ದ ಹೆಬ್ಬಾರ್, ಸೋಮಶೇಖರ್

ಜೆಡಿಎಸ್​ ಹಾಗೂ ಬಿಜೆಪಿ ಸೇರಿಕೊಂಡು ಐದನೇ ಅಭ್ಯರ್ಥಿ ಕಣಕ್ಕಳಿಸಿದ್ದರಿಂದ ರಾಜ್ಯಸಭಾ ಚುನಾವಣೆ ಮತಗಳ ಲೆಕ್ಕಾಚಾರ ಜೋರಾಗಿ ನಡೆದಿತ್ತು. ಅಡ್ಡ ಮತದಾನದ ಭೀತಿ ಕಾಂಗ್ರೆಸ್​ಗೆ ಕಾಡುತ್ತಿತ್ತು. ಅಂತಿಮವಾಗಿ ಆಡಳಿತರೂಢ ಕಾಂಗ್ರೆಸ್​, ಮೈತ್ರಿ ಪಕ್ಷಗಳಿಗೆ ಶಾಕ್ ಕೊಟ್ಟಿತ್ತು. ಅಂದು ಕೊಂಡಂತೆ ಕಾಂಗ್ರೆಸ್​, ಸೋಮಶೇಖರ್ ಅವರನ್ನು ಅಡ್ಡಮತದಾನ ಮಾಡಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು, ಶಿವರಾಮ್ ಹೆಬ್ಬಾರ್ ಅವರನ್ನು ಮತದಾನಕ್ಕೆ ಬರದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ಮತದಾನಕ್ಕೂ ಹಿಂದಿನ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್​ ನಾಯಕರು, ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್​ ಜೊತೆ ಮಾತುಕತೆ ನಡೆಸಿದ್ದರು. ಒಬ್ಬರು ಅಡ್ಡಮತದಾನ ಮಾಡಬೇಕು, ಮತ್ತೊಬ್ಬರು ಮತದಾನಕ್ಕೆ ಗೈರಾಗಬೇಕೆಂದು ಟಾಸ್ಕ್​ ನೀಡಿದ್ದರು. ಮಾತುಕತೆಯಂತೆ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ನಡೆದುಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Tue, 5 March 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್