Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಕಾರವಾರ, ಬಾದಾಮಿ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ 7 ಸೆಂಟಿ ಮೀಟರ್ ಮಳೆ ಆಗಿದೆ. ಮುಂದಿನ ಮೂರು ದಿನಗಳ ಕಾಲ ಈ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 04, 2021 | 3:08 PM

ಬೆಂಗಳೂರು: ಕರ್ನಾಟಕ ರಾಜಧಾನಿಯಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸೂಚನೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇಂದು (ಜೂನ್ 4) ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡಿನ ಎಲ್ಲಾ ಭಾಗಗಳಲ್ಲೂ ಮಳೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಸೆಂಟಿ ಮೀಟರ್ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ ಪ್ರದೇಶದಲ್ಲಿ ಕೂಡ 11 ಸೆಂಟಿ ಮೀಟರ್ ಮಳೆ ಸುರಿದಿದೆ. ಜೊತೆಗೆ, ಬೆಳಗಾವಿಯಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ.

ಕಾರವಾರ, ಬಾದಾಮಿ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ 7 ಸೆಂಟಿ ಮೀಟರ್ ಮಳೆ ಆಗಿದೆ. ಮುಂದಿನ ಮೂರು ದಿನಗಳ ಕಾಲ ಈ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ. ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕರಾವಳಿಯ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗಲಿದ್ದು ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ಕೊಡಲಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿಯೂ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಮುಂಗಾರುಶನಿವಾರದ ವೇಳೆಗೆ ದಕ್ಷಿಣ ಅರಬ್ಬೀ ಸಮುದ್ರದ ಉಳಿದ ಭಾಗಗಳು, ಮಧ್ಯ ಅರಬ್ಬೀ ಸಮುದ್ರದ ಕೆಲವು ಭಾಗಗಳು ಮತ್ತು ಕೇರಳ ಮತ್ತು ಲಕ್ಷದ್ವೀಪದ ಉಳಿದ ಭಾಗಗಳಿಗೆ ಬರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿತ್ತು. ಇದು ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳನ್ನು, ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳನ್ನು, ರಾಯಲಸೀಮವನ್ನು ಮತ್ತು ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳನ್ನು ಇಂದು ಮತ್ತು ನಾಳೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿತ್ತು.

ಕರ್ನಾಟಕ-ಕೇರಳ ಕರಾವಳಿಯ ಸರಾಸರಿ ಸಮುದ್ರ ಮಟ್ಟದಲ್ಲಿ ಕಡಿಮೆ ಒತ್ತಡದ ಪ್ರದೇಶ ಮತ್ತು ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಪಶ್ಚಿಮ ಗಾಳಿಯನ್ನು ಬಲಗೊಳ್ಳಲಿದ್ದುಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು.

ಇದನ್ನೂ ಓದಿ: Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Monsoon Diet Tips: ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಒಂದಿಷ್ಟು ಟಿಪ್ಸ್​

Published On - 3:02 pm, Fri, 4 June 21