ಕರ್ನಾಟಕದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್: ಕೊನೆಗೂ ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್
ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಯೂ ಕಡಿಮೆಯಾಗಿದೆ. ಇದರಿಂದ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದ್ದು, ಇದರಿಂದ ಪಂಪ್‌ಸೆಟ್ ನಂಬಿಕೊಂಡು ಕೃಷಿ ಮಾಡುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಕೆಲ ಸರ್ಕಾರದ ಪ್ರತಿನಿಧಿಗಳು ಮಾತ್ರ ಲೋಡ್ ಶೆಡ್ಡಿಂಗ್ ಇಲ್ಲ. ವಿದ್ಯುತ್ ಕೊರತೆ ಇಲ್ಲ ಇಲ್ಲ ಎಂದು ಸಬೂಬು ಹೇಳಿಕೆ ಕೊಡುತ್ತಿದ್ದಾರೆ. ಆದ್ರೆ, ಇದೀಗ ಡಿಸಿಎಂ ಹಾಗೂ ಸಚಿವರೊಬ್ಬರು ಲೋಡ್ ಶೆಡ್ಡಿಂಗ್ ಬಗ್ಗೆ ಸತ್ಯ ಒಪ್ಪಿಕೊಂಡಿದ್ದಾರೆ.
ಬೆಂಗಳೂರು, (ಅಕ್ಟೋಬರ್ 12): ಕರ್ನಾಟಕದಲ್ಲಿ ವಿದ್ಯುತ್ ಕೊರತೆ (power Shortage In Karnataka) ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ (Load Shedding) ಶುರುವಾಗಿದೆ. ಇದರಿಂದ ರೈತರು ಕಂಗಲಾಗಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದೀಗ ರಾಜ್ಯದಲ್ಲಿ ವಿದ್ಯುತ್ ಕೊರತೆ ಹಾಗೂ ಲೋಡ್ ಶೆಡ್ಡಿಂಗ್ ಬಗ್ಗೆ ಕೊನೆಗೂ ಉಪಮುಖ್ಯಮಂತ್ರ ಡಿಕೆ ಶಿವಕುಮಾರ್(DK Shivakumar) ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ಅ,12)ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ ಎಂದು ಪರೋಕ್ಷವಾಗಿ ಶೆಡ್ಡಿಂಗ್ ಬಗ್ಗೆ ಸತ್ಯ ಒಪ್ಪಿಕೊಂಡರು.
ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ .10,000 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಇದೆ. ಈಗಾಗಲೇ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೆಂಟ್ರಲ್ ಗ್ರಿಡ್ನಿಂದ ವಿದ್ಯುತ್ ಕೊಟ್ಟರೇ ನಮಗೆ ಅನುಕೂಲ ಆಗುತ್ತೆ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಕೇಂದ್ರ ಸರ್ಕಾರದ ಸಹಾಯ ಮಾಡಬೇಕು ಎನ್ನುವ ಅರ್ಥದಲ್ಲಿ ಹೇಳಿದರು.
ಇದನ್ನೂ ಓದಿ: Bangalore Power Cut: ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ವಿದ್ಯುತ್ ವ್ಯತ್ಯಯ
ಇನ್ನು ಒದೇ ವೇಳೆ ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಳೆ ಬಿದ್ದಿದಿದ್ರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಅಲ್ವಾ ಅವರ ಕಾಲದಲ್ಲಿ ಎಷ್ಟು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಲಿ ಎಂದು ತಿರುಗೇಟು ನೀಡಿದರು.
ಇನ್ನು ಈ ಲೋಡ್ ಶೆಡ್ಡಿಂಗ್ ಬಗ್ಗೆ ಸ್ವತಃ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಲೋಡ್ ಶೆಡ್ಡಿಂಗ್ ಸಮಸ್ಯೆ ಇದೆ, ಲೋಡ್ ಶೆಡ್ಡಿಂಗ್ ಇರುವುದು ಸತ್ಯ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದು, ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಳೆ ಮಾಯವಾಗಿದೆ..ಡ್ಯಾಂಗಳೆಲ್ಲಾ ಖಾಲಿಯಾಗಿವೆ. ಈ ಬರದ ನಡುವೆ ರಾಜ್ಯದ ರೈತರಿಗೆ ಮತ್ತೊಂದು ಬರೆ ಎದುರಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ನಿತ್ಯ 7 ತಾಸು ತ್ರೀಪೇಸ್ ಕರೆಂಟ್ ನೀಡುತ್ತಿದ್ದ ಸರ್ಕಾರ ಅದನ್ನ ಎರಡು ತಾಸಿಗೆ ಇಳಿಸಿದೆ. ಇದರಿಂದ ರೈತರಂತೂ ಕೆರಳಿದ್ದಾರೆ. ಕೆಲವರು ಸಮಸ್ಯೆ ಸುಳಿಗೆ ಸಿಲುಕಿದ್ದಾರೆ. ಪಂಪ್‌ಸೆಟ್ ನಂಬಿ ನೀರಾವರಿ ಮಾಡಿರೋ ರೈತರು ಕರೆಂಟ್‌ನ ಕಣ್ಣಾಮುಚ್ಚಾಲೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಲದಲ್ಲಿನ ಬೆಳೆ ನೋಡಿ ಕೆಲವರು ಕಣ್ಣೀರು ಹಾಕಿದ್ರೆ, ಹಲವರು ರೈತರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ